ಸರ್ಕಾರಿ ಕಚೇರಿ, ಶಾಲಾ- ಕಾಲೇಜುಗಳಲ್ಲಿ ಮಹಾವೀರ ಜಯಂತಿ ಸರಳ ಆಚರಣೆ

06042020 Tavaragera Mahaveer Jayanti
Published on

ತಾವರಗೇರಾ: ಪಟ್ಟಣದ ಸರ್ಕಾರಿ ಕಚೇರಿಗಳು ಸೇರಿ ವಿವಿಧ ಸಂಘ ಸಂಸ್ಥೆಗಳಲ್ಲಿ ಹಾಗೂ ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳಲ್ಲಿ ಮಹಾವೀರ ಜಯಂತಿಯನ್ನು ಸೋಮವಾರ ಆಚರಿಸಲಾಯಿತು.

ಪೊಲೀಸ್ ಠಾಣೆಯಲ್ಲಿ ಮಹಾವೀರ ಭಾವಚಿತ್ರಕ್ಕೆ ಪಿಎಸ್‌ಐ ಗೀತಾಂಜಲಿ ಶಿಂಧೇ ಪೂಜೆ ಸಲ್ಲಿಸಿದರೆ, ನಾಡಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ಸೂರ್ಯಕಾಂತ ನಾಯಕ, ಪಪಂ ಕಚೇರಿಯಲ್ಲಿ ಮುಖ್ಯಾಧಿಕಾರಿ ಶಂಕರ ಕಾಳೆ ಪೂಜೆ ಸಲ್ಲಿಸಿದರು.

ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ, ಸರ್ ಎಂ.ವಿಶ್ವೇಶ್ವರಯ್ಯ ಸಂಯುಕ್ತ ಪದವಿ ಪೂರ್ವ ಕಾಲೇಜು, ಶ್ರೀ ಶಶಿಧರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕರ, ಬಾಲಕಿಯರ ಸಂಯುಕ್ತ ಪದವಿ ಪೂರ್ವಕಾಲೇಜು, ಸರ್ಕಾರಿ ಬಾಲಕರ, ಬಾಲಕಿಯರ ಪ್ರೌಢ ಶಾಲೆ, ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆ, ಮುರಾರ್ಜಿ ದೇಸಾಯಿ ವಸತಿ ಶಾಲೆ, ಅಲೆಮಾರಿ ಹಾಗೂ ಅರೆಅಲೆಮಾರಿ ಆಶ್ರಮ ವಸತಿ ಶಾಲೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ಮಹಾವೀರ ಜಯಂತಿ ಆಚರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net