ಹಸೆಮಣೆ ಏರಬೇಕಿದ್ದ ಜೋಡಿ ಆತ್ಮಹತ್ಯೆಗೆ ಶರಣು: ಹುಡುಗಿ ಮನೆಯಲ್ಲಿ ನಡೆಯಿತು ದುರಂತ

sucide pic
Published on

ತಾವರಗೇರಾ: ಇನ್ನೆರಡು ತಿಂಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕ-ಯುವತಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮರೇಶ ಪಾಟೀಲ್ (21), ಯಲ್ಲಮ್ಮ (18) ಮೃತರು. ಇಬ್ಬರದೂ ಸಮೀಪದ ಅಡವಿಭಾವಿ ಗ್ರಾಮವಾಗಿದ್ದು, ಅಕ್ಕಪಕ್ಕದಲ್ಲಿಯೇ ಮನೆಗಳಿವೆ. ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿತ್ತು. ಇನ್ನೆರಡು ತಿಂಗಳಲ್ಲಿ ಮದುವೆ ಮಾಡಲು ಎರಡೂ ಕುಟುಂಬದವರು ನಿರ್ಧರಿಸಿದ್ದರು. ಆದರೆ, ಮಂಗಳವಾರ ಹುಡುಗಿ ಮನೆಯಲ್ಲಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗಂಗಾವತಿ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ , ಸಿಪಿಐ ನಿಂಗಪ್ಪ ರುದ್ರಪ್ಪಗೋಳ, ತಾವರಗೇರಾ ಪಿಎಸ್‌ಐ ವೈಶಾಲಿ ಝಳಕಿ , ಎಎಸ್‌ಐ ಮಲ್ಲಪ್ಪ ವಜ್ರದ್ ಭೇಟಿ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ. ತಾವರಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net