ತಾವರಗೇರಾ ವ್ಯಾಪ್ತಿಯಲ್ಲಿ ಉತ್ತಮ ಮಳೆ

Tavaragera Rain
ತಾವರಗೇರಾ ಸಮೀಪದ ಹಿರೇತೆಮ್ಮಿನಾಳ ಗ್ರಾಮದಲ್ಲಿ ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ಚೆಕ್ ಡ್ಯಾಂ ತುಂಬಿ ಹರಿಯುತ್ತಿರುವುದು.
Published on

ತಾವರಗೇರಾ: ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಗುರುವಾರ ರಾತ್ರಿ ಉತ್ತಮ ಮಳೆಯಾಗಿದೆ. ಹಳ್ಳ, ಕೃಷಿ ಹೊಂಡ, ಚೆಕ್ ಡ್ಯಾಂಗಳಲ್ಲಿ ನೀರು ತುಂಬಿದ್ದು, ಜನರಲ್ಲಿ ಹರ್ಷ ಮೂಡಿಸಿದೆ.

ಹೋಬಳಿ ವ್ಯಾಪ್ತಿಯ ಹಂಚಿನಾಳ ಹಳ್ಳ, ಹುಲಿಯಾಪುರ ಹಳ್ಳ, ಹಿರೇತೆಮ್ಮಿನಾಳ ಹಳ್ಳ, ಸಂಗನಾಳ ಹಳ್ಳದಲ್ಲಿ ನೀರು ಸಂಗ್ರಹವಾಗಿದೆ. ಕಳೆದ 3-4 ತಿಂಗಳ ಹಿಂದೆ ಸಣ್ಣ ನೀರಾವರಿ ಇಲಾಖೆಯವರು ಹುಲಿಯಾಪುರದಿಂದ ಸಂಗನಾಳ ವರೆಗಿನ ಹಳ್ಳದುದ್ದಕ್ಕೂ 12 ಸರಣಿ ಚೆಕ್ ಡ್ಯಾಂ ಗಳನ್ನು ನಿರ್ಮಿಸಿದ್ದು, ಬಹುತೇಕ ಚೆಕ್ ಡ್ಯಾಂಗಳು ಭರ್ತಿಯಾಗಿವೆ. ಕಾಡು ಪ್ರಾಣಿಗಳು, ಜಾನುವಾರುಗೆ ನೀರಿನ ಸಮಸ್ಯೆ ನೀಗಿದಂತಾಗಿದೆ. ಚೆಕ್ ಡ್ಯಾಂ ಅಕ್ಕ-ಪಕ್ಕದ ರೈತರ ಜಮೀನಿನಲ್ಲಿರುವ ಕೊಳವೆ ಬಾವಿಗಳ ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net