ಶಿಸ್ತಿನಿಂದಾಗಿ ಬಿಜೆಪಿ ಜನಾನುರಾಗಿ- ಪಕ್ಷದ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್ ಹೇಳಿಕೆ

191221 Tavaragera BJP Meeting
ತಾವರಗೇರಾದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ಮಂಡಲ, ಶಕ್ತಿ ಕೇಂದ್ರಗಳ ಸಂಘಟನಾ ಸಭೆಯ ಉದ್ಘಾಟನೆಯನ್ನು ಭಾನುವಾರ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್, ಉಪಾಧ್ಯಕ್ಷ ಕೆ.ಮಹೇಶ ಇತರರು ಉದ್ಘಾಟಿಸಿದರು.
Published on

ತಾವರಗೇರಾ: ವಿಶಿಷ್ಟ ಪರಂಪರೆ, ಶಿಸ್ತು ಹಾಗೂ ಅಚ್ಚುಕಟ್ಟಾದ ಕೆಲಸಗಳಿಂದಾಗಿ ಬಿಜೆಪಿ ಜನಾನುರಾಗಿಯಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್ ಹೇಳಿದರು.

ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮಂಡಲ, ಶಕ್ತಿ ಕೇಂದ್ರಗಳ ಸಂಘಟನಾ ಸಭೆಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ಪಪಂ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಬೇಕೆಂದು ತಿಳಿಸಿದರು. ಜಿಲ್ಲಾ ಉಪಾಧ್ಯಕ್ಷ ಕೆ.ಮಹೇಶ, ಪ್ರಧಾನ ಕಾರ್ಯದರ್ಶಿ ನವೀನ ಗುಳಗಣ್ಣನವರ, ಮಂಡಲ ಅಧ್ಯಕ್ಷ ಬಸವರಾಜ ಹಳ್ಳೂರು, ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರಿ, ಮಂಡಲ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜೂಲಕುಂಟಿ, ಚಂದ್ರಕಾಂತ ವಡಿಗೇರಿ, ಮಲ್ಲಣ್ಣ ಪಲ್ಲೇದ, ಶಶಿಧರ ಕವಲಿ, ಶಂಭನಗೌಡ ಪೊಲೀಸ್ ಪಾಟೀಲ್, ಉಮೇಶ ನಾಯಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net