ಪಪಂ ಜಾಗದಲ್ಲಿ ಪಾರ್ಕಿಂಗ್‌ಗೆ ಅವಕಾಶ ನೀಡಲು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮನವಿ

171121 Tavaragera Bus Stand Appeal
ತಾವರಗೇರಾ ಬಸ್ ನಿಲ್ದಾಣ ಸಮೀಪದ ಪಪಂ ಜಾಗದಲ್ಲಿ ಖಾಸಗಿ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಪಪಂ ಅಧಿಕಾರಿ ಶಾಮೂರ್ತಿ ಕಟ್ಟಿಮನಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
Published on

ತಾವರಗೇರಾ: ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಪಪಂಗೆ ಸೇರಿದ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಹಾಗೂ ಸಾಮಾಜಿಕ ಹೋರಾಟಗಾರರ ಸಂಘಟನೆಯಿಂದ ಬುಧವಾರ ಪಪಂ ಕಚೇರಿ ಹಾಗೂ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.

ಪಟ್ಟಣ ವ್ಯವಹಾರಿಕವಾಗಿ ಬೆಳೆಯುತ್ತಿದ್ದು, ಗ್ರಾಮೀಣ ಪ್ರದೇಶದಿಂದ ನಿತ್ಯ ನೂರಾರು ವಾಹನಗಳು ಬಂದು ಹೋಗುತ್ತವೆ. ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವುದರಿಂದ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಬಸ್ ನಿಲ್ದಾಣ ಸಮೀಪ ಪಪಂಗೆ ಸೇರಿದ ಜಾಗವಿದ್ದು ಅಲ್ಲಿ ವಾಹನಗಳ ನಿಲುಗಡೆಗೆ ಅನುಮತಿ ನೀಡುವಂತೆ ಒತ್ತಾಯಿಸಿದರು. ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಸ್ಥಳೀಯ ಅಧ್ಯಕ್ಷ ಯಮನೂರಪ್ಪ ಬಿಳೆಗುಡ್ಡ, ಪ್ರಮುಖರಾದ ರಾಜಾ ನಾಯಕ , ಅಲಿ ಆದಿಲ್, ಶಾಮಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net