

ತಾವರಗೇರಾ: ಬೆಳಗಾವಿ ಲೋಕಸಭೆ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ನಿರೀಕ್ಷೆಗೂ ಮಿರಿ ಹೆಚ್ಚಿನ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ಎಂಎಲ್ಸಿ ಎನ್.ರವಿಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಸಮೀಪದ ಪುರ ಗ್ರಾಮದ ಸೋಮನಾಥೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವದರಿಂದ ಜನರು ಬಿಜೆಪಿ ಬಗ್ಗೆ ಒಲವು ತೋರಲಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಜನಪರ ಯೋಜನೆಗಳನ್ನು ಜಾರಿಗೆ ತಂದು ಜನರ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದರು.
ಗ್ರಾಪಂ ಮಾಜಿ ಸದಸ್ಯ ರಮೇಶ ಗಿರಣಿ, ಯಂಕೋಬ ಗದ್ದಿ, ಶಿವಪ್ಪ ಮುಳ್ಳೂರು, ಸೋಮಣ್ಣ ಮುಳ್ಳೂರು ಹಾಗೂ ಗ್ರಾಮದ ಗಣ್ಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.