ತಾವರೆಕೆರೆ ಗ್ರಾಪಂಗೆ ಅವಿರೋಧ ಆಯ್ಕೆ

tavarekere gp election
Published on

ವಿಜಯವಾಣಿ ಸುದ್ದಿಜಾಲ ನಂದಗುಡಿ
ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ರಮೇಶ್, ಉಪಾಧ್ಯಕ್ಷೆಯಾಗಿ ಅಸ್ಮಾತಾಜ್ ಜಿಯಾವುಲ್ಲಾ ಅವಿರೋಧ ಆಯ್ಕೆಯಾಗಿದ್ದಾರೆ.
ಗ್ರಾಪಂ ಕಚೇರಿಯಲ್ಲಿ ನಿಗದಿಪಡಿಸಿದ್ದ ಚುನಾವಣಾ ಪ್ರಕ್ರಿಯೆಯಲ್ಲಿ 2ನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲು ಸ್ಥಾನ ನಿಗದಿಯಾಗಿತ್ತು. ಎರಡೂ ಸ್ಥಾನಕ್ಕೆ ತಲಾ ಒಬ್ಬರು ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಎಂದು ಚುನಾವಣಾಧಿಕಾರಿ ಎಂ.ಪುಷ್ಪಾ ೋಷಿಸಿದರು.
ಅಧ್ಯಕ್ಷ ಎನ್.ರಮೇಶ್ ಮಾತನಾಡಿ, ಎಲ್ಲ ಸದಸ್ಯರನ್ನು ಗಣನೆಗೆ ತೆಗೆದುಕೊಂಡು ಒಗ್ಗಟ್ಟಿನಿಂದ ಗ್ರಾಪಂ ವ್ಯಾಪ್ತಿಗೆ ಒಳಪಡುವ 6 ಗ್ರಾಮವನ್ನು ಅಭಿವೃದ್ಧಿ ಪಡಿಸುವ ಮೂಲಕ ಮಾದರಿ ಗ್ರಾಪಂ ಮಾಡಲು ಶ್ರಮಿಸಲಾಗುವುದು ಎಂದರು.
ತಾಪಂ ಮಾಜಿ ಅಧ್ಯಕ್ಷ ಟಿ.ಎಸ್.ರಾಜಶೇಖರ್, ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಎಸ್.ಟಿ.ಮಂಜುನಾಥ್, ಆರ್.ರವಿಕುಮಾರ್, ಬಸವಪ್ರಕಾಶ್, ದಯಾನಂದಬಾಬು, ಮಾಜಿ ಉಪಾಧ್ಯಕ್ಷ ಸುಧಾಕರ್, ಪಿಡಿಒ ಮುನಿಗಂಗಯ್ಯ, ಗ್ರಾಪಂ ಸದಸ್ಯರಾದ ಬಿ.ಜಗದೀಶ್, ಮಂಜುಳಾ ನಾಗೇಶ್, ಲಕ್ಷ್ಮಮ್ಮ ಹನುಮಂತಪ್ಪ, ಕೃಷ್ಣಪ್ಪ, ಪ್ರಿಯಾಂಕಾ ರಮೇಶ್, ಅಶ್ವಿನಿ ದೇವರಾಜ್, ನಿತೀನ್‌ಕುಮಾರ್, ಕರವಸೂಲಿಗಾರ ರಾಜಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net