

ಬೆಳಗಾವಿ: ಲಾಕ್‌ಡೌನ್ ಸಂದರ್ಭದಲ್ಲಿ ಮಹಾನಗರ ಪಾಲಿಕೆಯು ಆಸ್ತಿ ತೆರಿಗೆ ಹೆಚ್ಚಿಸಿರುವ ನಿರ್ಧಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ
ಮಾಜಿ ನಗರ ಸೇವಕರ ಸಂಘದ ಪದಾಧಿಕಾರಿಗಳು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಲಾಕ್‌ಡೌನ್‌ನಿಂದ ನಗರದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬದುಕು ಸಾಗಿಸಲು ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಸ್ತಿ ತೆರಿಗೆ ಹೆಚ್ಚಿಸಿರುವುದು ಸರಿಯಲ್ಲ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು, ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳ ಬೇಕು ಎಂದು ಒತ್ತಾಯಿಸಿದರು.ಮನವಿ ಸ್ವೀಕರಿಸಿದ ಸಚಿವ ಅಂಗಡಿ ಮಾತನಾಡಿ, ಈ ಕುರಿತು ಪಾಲಿಕೆ ಆಯುಕ್ತರೊಂದಿಗೆ ಚರ್ಚಿಸುತ್ತೇನೆ. ಸಾರ್ವಜನಿಕರಿಗೆ ಹೊರೆಯಾಗದಂತೆ ಆಸ್ತಿ ತೆರಿಗೆ ಭರಿಸಿಕೊಳ್ಳುವಂತೆ ಸೂಚಿ ಸುತ್ತೇನೆ ಎಂದು ಭರವಸೆ ನೀಡಿದರು.ಸಂಘದ ಅಧ್ಯಕ್ಷ ನಾಗೇಶ ಸಾತೇರಿ, ಪ್ರಧಾನ ಕಾರ್ಯದರ್ಶಿ ದೀಪಕ ವಾೇಲಾ, ವಿಜಯ ಮೋರೆ, ಶಿವಾಜಿ ಸುಂಠಕರ, ಕಲ್ಲಪ್ಪ ಪ್ರಧಾನ, ಶಿವನಗೌಡ ಪಾಟೀಲ, ಕಿರಣ ಸಾಯನಾಕ್ ಇದ್ದರು.