ಟಿಬಿ ಡ್ಯಾಂ ಭರ್ತಿಗೆ 2.37 ಅಡಿ ಬಾಕಿ; ಎರಡ್ಮೂರು ದಿನಗಳಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ

140820 TB Dam
ತುಂಗಭದ್ರಾ ಜಲಾಶಯ.
Published on

ಬಳ್ಳಾರಿ: ತುಂಗಭದ್ರಾ ಅಣೆಕಟ್ಟೆ ಭರ್ತಿಗೆ ಕೇವಲ 2.37 ಅಡಿ ಬಾಕಿ ಇದೆ. ಜಲಾಶಯ 1633 ಅಡಿ ಎತ್ತರ ಇದ್ದು, ಶುಕ್ರವಾರ 1630.63 ಅಡಿವರೆಗೆ ನೀರು ಸಂಗ್ರಹವಾಗಿದೆ. ಇದರಿಂದಾಗಿ ಜಲಾಶಯದ ಕೆಳಭಾಗದ ನದಿಪಾತ್ರದ ಜನರಿಗೆ ಪ್ರವಾಹದ ಮುನ್ಸೂಚನೆ ನೀಡಲಾಗಿದೆ.

ಅಣೆಕಟ್ಟೆ 100.855 ಟಿಎಂಸಿ ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಶುಕ್ರವಾರ 91.984 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 49497 ಕ್ಯೂಸೆಕ್ ಒಳಹರಿವಿದೆ. ಇನ್ನೂ ಎರಡ್ಮೂರು ದಿನಗಳಲ್ಲಿ ಜಲಾಶಯ ಭರ್ತಿಯಾಗಲಿದೆ. ಇದರಿಂದಾಗಿ ಯಾವುದೇ ಸಂದರ್ಭ ನದಿಗೆ ನೀರು ಹರಿಸಲಾಗುವುದು. ನದಿ ಪಾತ್ರದ ಜನರ ಎಚ್ಚರಿಕೆಯಿಂದ ಇರಬೇಕು ಹಾಗೂ ಜನರ ಸುರಕ್ಷತೆಗೆ ಕ್ರಮಕೈಗೊಳ್ಳಬೇಕೆಂದು ತುಂಗಭದ್ರಾ ಮಂಡಳಿ ಅಧಿಕಾರಿಗಳು ಅಚ್ಚುಕಟ್ಟು ಪ್ರದೇಶದ ಜಿಲ್ಲಾಡಳಿತ ಹಾಗೂ ಇತರ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net