ಟಿಬಿಡ್ಯಾಂಗೆ ಲಕ್ಷಕ್ಕೂ ಕ್ಯೂಸೆಕ್ಸ್ ಅಧಿಕ ಒಳಹರಿವು

news
ತುಂಗಭದ್ರಾ ಜಲಾಶಯದ ಗುರುವಾರ ಮಟ್ಟ
Published on

ಹೊಸಪೇಟೆ: ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ಲಕ್ಷ ಕ್ಯೂಸೆಕ್ಸ್ ಒಳಹರಿವು ಹೆಚ್ಚಾಗಿದ್ದು, ಜಲಾಶಯದಲ್ಲಿ ಗುರುವಾರ ಬೆಳಗ್ಗೆ 46.802 ಟಿಎಂಸಿ ನೀರು ಹರಿದು ಬಂದಿದೆ.

ಜಲಾಶಯಕ್ಕೆ ಗುರುವಾರ ಬೆಳಗ್ಗೆ 8 ಗಂಟೆ ವರದಿ ಪ್ರಕಾರ 1.04 ಲಕ್ಚ ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. 1633 ಅಡಿಗೆ 1614.31 ಅಡಿಯಷ್ಟು ಜಲಾಶಯ ಭರ್ತಿಯಾಗಿದೆ. 46.802 ಟಿ.ಎಂ.ಸಿಯಷ್ಟು ನೀರು ಸಂಗ್ರಹಣೆಯಾಗಿದೆ. ಜಲಾಶಯಕ್ಕೆ ಇದೇ ಪ್ರಮಾಣದಲ್ಲಿ ಒಳಹರಿವು ಮುಂದುವರಿದಲ್ಲಿ, ಮುಂದಿನ ಒಂದು ವಾರದೊಳಗೆ ಜಲಾಶಯ ಭರ್ತಿಯಾಗುವ ನಿರೀಕ್ಷೆಯಿದೆ. 24 ಗಂಟೆಯಲ್ಲಿ 7 ಟಿಎಂಸಿಗೂ ಅಧಿಕ ನೀರು ಸಂಗ್ರಹವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net