

ಹೊಸಪೇಟೆ: ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದರಿಂದ ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ತುಂಗಭದ್ರಾ ಆಡಳಿತ ಮಂಡಳಿ ಸೂಚನೆ ನೀಡಿದೆ.
ಜಲಾಶಯದ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಜಲಾಶಯ 1633 ಅಡಿಗೆ ಈಗಾಗಲೇ 1621.32 ಅಡಿ ಭರ್ತಿಯಾಗಿದೆ. ಶನಿವಾರ 65 ಟಿಎಂಸಿ ನೀರು ಸಂಗ್ರಹ ವಾಗಿದೆ. ತುಂಗಾ ಜಲಾಶಯದಿಂದ 1,07,198 ಕ್ಯೂಸೆಕ್ ನೀರು ನದಿಗೆ ಬಿಡುಗಡೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜಲಾಶಯದಲ್ಲಿ ಒಳಹರಿವಿನ ಪ್ರಮಾಣ ಭಾರಿ ಹೆಚ್ಚಳವಾಗಿದೆ. ಆದ್ದರಿಂದ ಜಲಾಶಯ ಭರ್ತಿಯಾಗಿ ಯಾವುದೇ ಕ್ಷಣದಲ್ಲಿ ತುಂಗಭದ್ರಾ ನದಿಗೆ ನೀರು ಬಿಡಬಹುದು. ಆದ್ದರಿಂದ ನದಿಪತ್ರದ ಗ್ರಾಮಗಳ ಜನರಿಗೆ ಟಿಬಿಬಿ ಎಚ್ಚರಿಕೆ ನೀಡಿದೆ. ಹಾಗೂ ಅಧಿಕಾರಿಗಳು ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ.