ಮಕ್ಕಳಿಗೆ ಸಂಸ್ಕೃತಿಕ, ನೈತಿಕ ಶಿಕ್ಷಣ ಕಲಿಸಿ

21sri-1
Published on

ಶೃಂಗೇರಿ: ಅಭಿವೃದ್ಧಿಯಲ್ಲಿ ಭಾರತ ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೆ ಬರಬೇಕಾದರೆ ತಳಮಟ್ಟದಿಂದ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ವಿಧಾನಸಭಾ ಸಭಾಪತಿ ಯು.ಟಿ.ಖಾದರ್ ಹೇಳಿದರು.

ಜೆಸಿಬಿಎಂ ಕಾಲೇಜು ಮೈದಾನದಲ್ಲಿ ಅಕ್ಷರಮಿತ್ರ ಸಂಸ್ಥೆ ಆಯೋಜಿಸಿದ್ದ 16ನೇ ವರ್ಷದ ವಾರ್ಷಿಕೋತ್ಸವ, ಸಾಂಸ್ಕೃತಿಕ ಸಂಜೆ ಮತ್ತು ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಲ್ಲರಿಗೂ ಸರ್ಕಾರ ಪೂರ್ಣ ಪ್ರಮಾಣದ ಶಿಕ್ಷಣ ನೀಡಲು ಸಾಧ್ಯವಿಲ್ಲ. ಖಾಸಗಿ ಸಂಸ್ಥೆಗಳು ಉತ್ತಮ ಶಿಕ್ಷಣ ನೀಡಿದಾಗ ಭಾರತದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ರಾಷ್ಟ್ರ ಬಲಿಷ್ಠವಾಗಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾರ್ವಜನಿಕರ ಕಷ್ಟ ,ಸುಖಗಳಲ್ಲಿ ಭಾಗಿಯಾಗಿ ಸಮಾಜದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಮನುಷ್ಯ ಬಡತನದಲ್ಲಿ ಜನ್ಮ ತಾಳಬಹುದು ಆದರೆ ಬಡತನದಲ್ಲೇ ಮರಣ ಹೊಂದಬೇಕು ಎಂದಿಲ್ಲ. ಇಂದಿನ ಮಕ್ಕಳಿಗೆ ಸರಿಯಾದ ನೈತಿಕ, ಸಂಸ್ಕೃತಿ ಮತ್ತು ಬೌದ್ಧಿಕ ಶಿಕ್ಷಣ ನೀಡಿದಾಗ ಮಾತ್ರ ಭವಿಷದಲ್ಲಿ ಉತ್ತಮ ಪ್ರಜೆಗಳನ್ನು ಕಾಣಲು ಸಾಧ್ಯ ಎಂದರು.

ಶಾಸಕ ಟಿ.ಡಿ.ರಾಜೇಗೌಡ, ಎಂಎಲ್ಸಿ ಎಸ್.ಎಲ್ ಭೋಜೆಗೌಡ, ಮಾಜಿ ಶಾಸಕ ಡಿ.ಎನ್ ಜೀವರಾಜ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ, ಕೆಪಿಸಿಸಿ ಸದಸ್ಯರಾದ ಚಂದ್ರಣ್ಣ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net