ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಶಿಸ್ತು ಕಲಿಸಿ

ನಾಪೋಕ್ಲು ಸಮೀಪದ ಹಳೇ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಎಲ ಕೆಜಿ ಹಾಗೂ ಯುಕೆಜಿ ತರಗತಿಯನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.
ನಾಪೋಕ್ಲು ಸಮೀಪದ ಹಳೇ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಎಲ ಕೆಜಿ ಹಾಗೂ ಯುಕೆಜಿ ತರಗತಿಯನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.
Published on

ನಾಪೋಕ್ಲು: ಗ್ರಾಮೀಣ ಭಾಗದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸಿಗುವ ಶಿಕ್ಷಣ ಪ್ರಮುಖವಾದದು ಎಂದು ವಿರಾಜಪೇಟೆ ಶಾಸಕ ಎ. ಎಸ್.ಪೊನ್ನಣ್ಣ ಹೇಳಿದರು.

ಸಮೀಪದ ಹಳೇ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಶನಿವಾರ ಎಲ್ಕೆಜಿ ಹಾಗೂ ಯುಕೆಜಿ ತರಗತಿ ಉದ್ಘಾಟಿಸಿ ಮಾತನಾಡಿದರು. ಇಂದಿನ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕಾದರೆ ಶಿಕ್ಷಣಕ್ಕೆ ಭದ್ರ ಅಡಿಪಾಯ ಬೇಕಿದೆ. ಅದು ಅಂಗನವಾಡಿ ಕೇಂದ್ರಗಳ ಮುಖಾಂತರ ಆಗಬೇಕಿದೆ. ಎಳೆಯ ವಯಸ್ಸಿನಿಂದಲೇ ಮಕ್ಕಳು ಶಿಸ್ತು ಕಲಿಯಬೇಕು ಎಂದರು.

ಉತ್ತಮ ಪ್ರಜೆಗಳನ್ನು ರೂಪಿಸಬೇಕೆಂಬುದು ಸರ್ಕಾರದ ಆಶಯ. ಆ ನಿಟ್ಟಿನಲ್ಲಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ,ಯುಕೆಜಿ ಪ್ರಾರಂಭಿಸಲಾಗುತ್ತಿದೆ. ವಿರಾಜಪೇಟೆ ತಾಲೂಕಿನ ಕೆಲವೆಡೆ ಈಗಾಗಲೇ ಆರಂಭಿಸಲಾಗಿದ್ದು, ಗ್ರಾಮೀಣ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಎಲ್ಕೆಜಿ ಕೊಠಡಿ ಉದ್ಘಾಟಿಸಿ ಮಾತನಾಡಿದ ದಾನಿ ಡಾ.ದೇವದಾಸ್ ಮಾತನಾಡಿ, ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಈ ಕಾರ್ಯಕ್ರಮ ಶ್ಲಾಘನೀಯ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದರು.

ಸ್ಥಳ ದಾನಿಗಳಾದ ಕುಲ್ಲೇಟಿರ ಚಿನ್ನವ್ವ, ಡಾ. ದೇವದಾಸ್ ಅವರನ್ನು ಅಂಗನವಾಡಿ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ್ ಬೇಬ, ಮಾಚೇಟ್ಟಿರ ಕುಶು ಕುಶಾಲಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪ್ರಸನ್ನ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net