ಚಿಕ್ಕಂದಿನಿಂದಲೇ ಮಕ್ಕಳಿಗೆ ಸಂಸ್ಕಾರ ಕಲಿಸಿ

1000548660
ಹಿರೀಸಾವೆಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕ ವತಿಯಿಂದ ಕನ್ನಡ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
Published on

ಹಿರೀಸಾವೆ : ಶೈಕ್ಷಣಿಕ ಹಂತದಿಂದಲೇ ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಕಲ್ಪಿಸುವುದು ಅಗತ್ಯ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ತಮ್ಮಣ್ಣಗೌಡ ಹೇಳಿದರು.

ಇಲ್ಲಿನ ಸರ್ಕಾರಿ ಬಾಲಕೀಯರ ಫ್ರೌಢಶಾಲೆಯ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳಲ್ಲಿ ಧೈರ್ಯ, ಆತ್ಮಸ್ಥೈರ್ಯ ಹಾಗೂ ಸಮಾಜದಲ್ಲಿ ನಿಂತು ಮಾತನಾಡುವ ಸಾಮರ್ಥ್ಯ ಹೆಚ್ಚಾಗಿರುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್.ದೀಪಾ ಮಾತನಾಡಿ, ಕನ್ನಡ ಭಾಷೆಗೆ ತನ್ನದೇ ಆದ ವಿಶೇಷ ಸ್ಥಾನ-ಮಾನವಿದೆ. ಈ ವರ್ಷದ ಬೂಕರ್ ಪ್ರಶಸ್ತಿ ನಮ್ಮ ಕನ್ನಡಕ್ಕೆ ಅದರಲ್ಲಿಯೂ ಹಾಸನದವರಿಗೆ ಲಭಿಸಿರುವುದು ವಿಶೇಷ ಸಂಗತಿಯಾಗಿದೆ. ಕನ್ನಡ ನಾಡು ದೇಶಕ್ಕೆ ಪ್ರಧಾನ ಮಂತ್ರಿ, ಕವಿ, ಸಾಹಿತಿ, ಕ್ರೀಡಾಪಟು, ವಿಜ್ಞಾನಿ ಸೇರಿದಂತೆ ಹಲವಾರು ಪ್ರತಿಭೆಗಳನ್ನು ಕೊಡುಗೆಯಾಗಿ ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿನ ಸುಮಾರು 47 ವಿರ್ದ್ಯಾರ್ಥಿಗಳು ಕನ್ನಡ ವಿಷಯದಲ್ಲಿ 125 ಕ್ಕೆ 125 ಅಂಕಗಳನ್ನು ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಇತೀಚಿನ ವರ್ಷಗಳಿಂದ ಮಕ್ಕಳಿಗೆ ಓದಿನ ಕಡೆಗೆ ಹೆಚ್ಚಿನ ಒಲವು ಇರುವುದು ಕಂಡುಬರುತ್ತಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ಅಧ್ಯಕ್ಷ ಎಚ್.ಎ.ಪ್ರಮೋದ್ ಮಾತನಾಡಿ, ಬಿಡುವಿನ ವೇಳೆಯಲ್ಲಿ ಕಥೆ, ಕಾದಂಬರಿ ಹಾಗೂ ಇತಿಹಾಸ ತೆರೆದಿಡುವ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇದರಿಂದ ನಿಮ್ಮಲ್ಲಿ ಜ್ಞಾನ ಬೆಳೆಯುತ್ತದೆ. ಶಿಕ್ಷಣವಂತರು ಹಾಗೂ ಜ್ಞಾನವಂತರು ಹೆಚ್ಚಿದಂತೆಲ್ಲ ಸಮಾಜದಲ್ಲಿ ಹೊಸ ಬದಲಾವಣೆ ಮೂಡಲಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪ್ರಸ್ತುತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ 125 ಕ್ಕೆ 125 ಅಂಕಗಳನ್ನು ಪಡೆದಿರುವ 39 ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿರುವ ಇಬ್ಬರು ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಭಿನಂಧಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಉಪಾಧ್ಯಕ್ಷ ಮಲ್ಲೇಶ್‌ಗೌಡ, ಕಾರ್ಯದರ್ಶಿ ಜಬಿವುಲ್ಲಾ ಬೇಗ್, ಹೋಬಳಿ ಘಟಕದ ನಿಕಟಪೂರ್ವ ಅಧ್ಯಕ್ಷ ಎಚ್.ಪಿ.ಶಂಕರ್, ಖಜಾಂಚಿ ಟಿ.ಪಿ.ಮಂಜು, ಡಯಟ್ ಉಪಾನ್ಯಾಸಕ ತಮ್ಮಣ್ಣಗೌಡ, ಕಸಾಪ ಪದಾಧಿಕಾರಿಗಳಾದ ಗೋವಿಂದಯ್ಯ, ಮಾರುತಿ ಮಂಜು, ಜೀವಿ ಗೋವಿಂದರಾಜ್, ದಾಸರಹಳ್ಳಿ ಕುಮಾರ್, ಪುರುಷೋತ್ತಮ್, ಭಾರತಿ, ಮಾದಲಗೆರೆ ನಂಜೇಗೌಡ, ಶಾಲಾ ಮುಖ್ಯಶಿಕ್ಷಕ ರಾಮೇಗೌಡ, ಶಿಕ್ಷಕ ಲೋಕೇಶ್, ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net