

ಹರಪನಹಳ್ಳಿ: ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರ ಜತೆಗೆ ಪ್ರಶ್ನಿಸುವ ಕೌಶಲ್ಯ ಕಲಿಸಬೇಕು ಎಂದು ವಿವಿಎಸ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಮೋಹನ್ ರೆಡ್ಡಿ ಹೇಳಿದರು.
ಪಟ್ಟಣದ ವಿವಿಎಸ್ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಪ್ರಶ್ನಿಸಿದರೆ ಸಮರ್ಪಕ ಉತ್ತರದ ಜತೆ ಗುಣಮಟ್ಟದ ಶಿಕ್ಷಣಕ್ಕೆ ಅನುಕೂಲವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಪ್ರಶ್ನಿಸುವುದನ್ನು ಅಭ್ಯಾಸ ಮಾಡಿಕೊಳ್ಳಿ ಎಂದರು.