ಮಕ್ಕಳಿಗೆ ಲಿಂಗಾಯತ ಧರ್ಮದ ತತ್ವಗಳನ್ನು ತಿಳಿಸಿ

ಮಾನ್ವಿ ಪ್ರಗತಿ ಪಿಯು ಕಾಲೇಜು ಆವರಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಮಿರ್ಜಾಪೂರ ಮಾತನಾಡಿದರು. ಕಲ್ಮಠ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯರು, ಹಿರಿಯ ವೈದ್ಯ ಬಸವಪ್ರಭು ಪಾಟೀಲ್ ಬೆಟ್ಟದೂರು ಇತರರಿದ್ದರು.

Published on

ಮಾನ್ವಿ: ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಅನುಕೂಲಕ್ಕೆ ಬೇಸಿಗೆ ಶಿಬಿರದ ಸದ್ಬಳಕೆ ಮಾಡಿಕೊಳ್ಳಿ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಮಿರ್ಜಾಪುರು ಹೇಳಿದರು.

ಪಟ್ಟಣದ ಪ್ರಗತಿ ಪಿಯು ಕಾಲೇಜು ಆವರಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದಿಂದ ಶುಕ್ರವಾರ ಹಮ್ಮಿಕೊಂಡಿದ್ದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳಿಗೆ ಶಿಕ್ಷಣದ ಜತೆ ಲಿಂಗಾಯತ ಧರ್ಮದ ತತ್ವಗಳ ಬಗ್ಗೆ ತಿಳಿಸಬೇಕು. ಮುಂದಿನ ದಿನಗಳಲ್ಲಿ ಪಾಲಕರ ಸಲಹೆಯಂತೆ ಪಿಯು ವಿದ್ಯಾರ್ಥಿಗಳಿಗೂ ಬೇಸಿಗೆ ಶಿಬಿರ ಆಯೋಜನೆಗೆ ಸಹಕಾರ ನೀಡಲಾಗುವುದು ಎಂದರು.

ಕಲ್ಲೂರು ಅಡಿವೇಶ್ವರ ಮಠದ ಶಂಭುಲಿಂಗ ಸ್ವಾಮೀಜಿ ಮಾತನಾಡಿ, ಆಧುನಿಕ ಯುಗದಲ್ಲಿ ಗ್ರಾಮೀಣ ಮಕ್ಕಳು ಪೈಪೋಟಿ ನೀಡಿ ಉನ್ನತ ಶಿಕ್ಷಣ ಪಡೆಯಲು ಬೇಸಿಗೆ ಶಿಬಿರಗಳು ಸಹಕಾರಿಯಾಗಿವೆ ಎಂದು ಹೇಳಿದರು.

ಕಲ್ಮಠ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯರು, ಕರೆಗುಡ್ಡ ಮಹಾಂತೇಶ್ವರ ಮಠದ ಮಹಾಂತಲಿಂಗ ಸ್ವಾಮೀಜಿ, ಹಿರಿಯ ವೈದ್ಯ ಬಸವಪ್ರಭು ಪಾಟೀಲ್ ಬೆಟ್ಟದೂರು, ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಅರುಣ ಕುಮಾರ, ಪ್ರಮುಕರಾದ ತಿಪ್ಪಣ್ಣ ಹೊಸಮನಿ, ಶ್ರೀಧರಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net