ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕನ ಬಂಧನ

crime
Published on

ಹುಬ್ಬಳ್ಳಿ: ಮನೆಪಾಠ ಹೇಳಿಕೊಡುವ ನೆಪದಲ್ಲಿ ಒಂದು ವರ್ಷದಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಮನಗಟ್ಟಿ ಶಾಲೆ ಆಂಗ್ಲಭಾಷೆ ಶಿಕ್ಷಕನನ್ನು ನವನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಮಹೇಶ ಚಂದಾಪುರ ಬಂಧಿತ. ಗಾಮನಗಟ್ಟಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿದ್ದ ಈತ 14 ವರ್ಷದ ವಿದ್ಯಾರ್ಥಿನಿಗೆ ಮನೆಪಾಠ ಮಾಡುವ ನೆಪದಲ್ಲಿ ಕರೆಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದ ಎಂಬ ಆರೋಪವಿತ್ತು.

ಪಾಲಕರು ಕೊಟ್ಟ ದೂರಿನ ಮೇರೆಗೆ ನವನಗರ ಠಾಣೆಯಲ್ಲಿ ಫೋಕ್ಸೊ ಪ್ರಕರಣ ದಾಖಲಾಗಿದ್ದು, ಶಿಕ್ಷಕನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net