ಕಾನ್‌ಬೈಲ್ ಶಾಲೆಗೆ ಶಿಕ್ಷಕರ ನಿಯೋಜನೆ

10sunti01
Published on

ಸುಂಟಿಕೊಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಂಟಿಕೊಪ್ಪ ವಲಯದ ವತಿಯಿಂದ ಜ್ಞಾನದೀಪ ಯೋಜನೆಯಡಿಯಲ್ಲಿ ಕಾನ್‌ಬೈಲ್ ಸರ್ಕಾರಿ ಪ್ರಾಥಮಿಕ ಶಾಲೆಗೆ ಓರ್ವ ಶಿಕ್ಷಕರ ನಿಯೋಜನೆ ಮಾಡಲಾಯಿತು.

ಕಾನ್‌ಬೈಲ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 52 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಇಬ್ಬರು ಕಾಯಂ ಶಿಕ್ಷಕರು ಮತ್ತು ಅರೆಕಾಲಿಕವಾಗಿ ಒಬ್ಬ ಶಿಕ್ಷಕಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶಾಲೆಯಲ್ಲಿ ಶಿಕ್ಷಕರ ಕೊರತೆಯನ್ನು ಮನಗಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಯೋಜನೆಯಡಿಯಲ್ಲಿ ಒಬ್ಬ ಶಿಕ್ಷಕರನ್ನು ನೇಮಕಾತಿಗೊಳಿಸಲಾಯಿತು.

ಈ ಸಂದರ್ಭದಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕರು, ತಾಲೂಕು ಯೋಜನಾಧಿಕಾರಿ ಮತ್ತು ಕಾನ್‌ಬೈಲ್ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಯಶೋದಾ ಅವರಿಗೆ ಶಾಲೆಯ ಮುಖ್ಯಶಿಕ್ಷಕಿ ಶಾಂತಿ, ಸಹ ಶಿಕ್ಷಕರು, ಪಾಲಕರು ಹಾಗೂ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net