VolleyBall ತರಬೇತಿ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಶಿಕ್ಷಕ ಸಾವು

Gajanana Hiremath
Published on

ಶಿವಮೊಗ್ಗ: ವಿದ್ಯಾರ್ಥಿಗಳಿಗೆ (Students) ವಾಲಿಬಾಲ್​ (VolleyBall) ತರಬೇತಿ ನೀಡುತ್ತಿದ್ದ ವೇಳೆ ದೈಹಿಕ ಶಿಕ್ಷಕರೊಬ್ಬರು (PE Teacher) ಶಾಲೆಯ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಸಾಗರ (Sagara) ತಾಲ್ಲೂಕಿನಲ್ಲಿ ನಡೆದಿದೆ.

ಮೃತರನ್ನು ಗಜಾನನ ಹಿರೇಮಠ್​ (46) ಎಂದು ಗುರುತಿಸಲಾಗಿದ್ದು, ಇವರು ಸಾಗರ ಪಟ್ಟಣದ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಶಾಲೆಯ ಆವರಣದಲ್ಲಿ ಶಿಕ್ಷಕ ಗಜಾನನ ವಿದ್ಯಾರ್ಥಿಗಳಿಗೆ ವಾಲಿಬಾಲ್​ (VolleyBall) ತರಬೇತಿ ನೀಡುತ್ತಿದ್ದರು. ಈ ವೇಳೆ ಶಿಕ್ಷಕ (Teacher) ದಿಢೀರ್​ ಎಂದು ಕುಸಿದು ಬಿದ್ದಿದ್ದು, ಕೂಡಲೇ ಅಲ್ಲಿದ್ದವರು ಅವರನ್ನು ಆಸ್ಪತ್ರೆಗೆ (Hospital) ದಾಖಲಿಸಿದ್ಧಾರೆ. ಆದರೆ, ಮಾರ್ಗಮಧ್ಯೆಯೇ ಅವರು ಕೊನೆಯುಸಿರು ಎಳೆದಿರುವಾಗಿ ವೈದ್ಯರು ಘೋಷಿಸಿದ್ದಾರೆ.

ವಿಚಾರ ತಿಳಿದು ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ, ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪದಾಧಿಕಾರಿಗಳು, ಶಿಕ್ಷಕರು ಸೇರಿದಂತೆ ಹಲವರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net