ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಿರಿಯ, ಹಿರಿಯ ಮತ್ತು ಪ್ರೌಢ ಶಾಲೆಗಳ ಹಂತದಲ್ಲಿ ಜಿಲ್ಲಾ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದವರಿಗೆ ಸನ್ಮಾನ ಮಾಡಿ, ದಕ್ಷಿಣ ವಲಯ ಮತ್ತು ಉತ್ತರ ವಲಯದ ನಿವೃತ್ತ ಶಿಕ್ಷಕರಿಗೆ ಅಭಿನಂದನೆ, ಊಟದ ವ್ಯವಸ್ಥೆ ಇನ್ನಿತರ ಮೂಲ ಸೌಕರ್ಯ ಕಲ್ಪಿಸಲು ಕ್ರಮವಹಿಸಿ. ದಿನಾಚರಣೆ ವ್ಯವಸ್ಥಿತವಾಗಿ ನಡೆಸಲು ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿಗಳನ್ನು ವಹಿಸಬೇಕು ಎಂದರು.