

ಕೊಕ್ಕರ್ಣೆ: ಮಕ್ಕಳನ್ನು ಪ್ರೀತಿಯಿಂದ ಗೆಲ್ಲಬಹುದೇ ಹೊರತು ದ್ವೇಷದಿಂದ ಸಾಧ್ಯವಿಲ್ಲ. ಶಿಕ್ಷಣದಲ್ಲಿ ಪಾಲಕರ ಪಾತ್ರವೂ ಮಕ್ಕಳ ಬೆಳವಣಿಗೆಗೆ ಮತ್ತು ಯಶಸ್ಸಿಗೆ ಬಹಳ ಮುಖ್ಯವಾಗಿರುತ್ತದೆ ಎಂದು ಮನೋರೋಗ ತಜ್ಞ ಡಾ.ವಿರೂಪಾಕ್ಷ ದೇವರಮನೆ ಹೇಳಿದರು.
ಮುದ್ದೂರು ವಿ.ಎಸ್.ಎಸ್.ಆಂಗ್ಲ ವಾಧ್ಯಮ ಶಾಲೆಯಲ್ಲಿ ಗುರುವಾರ ನಡೆದ ಶಿಕ್ಷಕ-ರಕ್ಷಕ ಸಭೆಯಲ್ಲಿ ಮಾತನಾಡಿದರು.
ಶಾಲಾ ಅಧ್ಯಕ್ಷ ಪ್ರತಾಪ್ ಹೆಗ್ಡೆ ವಾರಾಳಿ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ಸದೃಢಗೊಳಿಸಲು ಆಡಳಿತ ಮಂಡಳಿ ಬದ್ಧವಾಗಿದೆ ಎಂದರು.
ಶಾಲಾ ಆಡಳಿತಾಧಿಕಾರಿ ಹೆರಾಲ್ಡ್ ಬಿ.ಲೆವಿಸ್, ಪ್ರಾಥಮಿಕ ವಿಭಾಗದ ಪ್ರಾಂಶುಪಾಲೆ ಅಮಿತಾ, ಪೌಢಶಾಲಾ ವಿಭಾಗದ ಪ್ರಾಂಶುಪಾಲೆ ಭಾರತಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಉಚಿತಾ ಶೆಟ್ಟಿ ಸ್ವಾಗತಿಸಿದರು. ದೀಕ್ಷಿತಾ ವಂದಿಸಿದರು. ಪೃಥ್ವಿ ನಿರೂಪಿಸಿದರು.