ಬೇಲೂರು: ಸಾಮಾಜಿಕ ಶೈಕ್ಷಣಿಕ ಗಣತಿಗೆಂದು ತೆರಳುತಿದ್ದ ಶಿಕ್ಷಕರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈರೇಗೌಡ ಗಾಯಗೊಂಡವರು. ತಾಲೂಕಿನ ಕೋನೇರ‌್ಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಾಮಿಕ ಶಾಲೆಯಲ್ಲಿ ಶಿಕ್ಷಕರಾಗಿರುವ ಈರೇಗೌಡ ಅವರು ಬುಧವಾರ ಸಮೀಕ್ಷೆಂದು ತಮ್ಮ ಬೈಕಿನಲ್ಲಿ ಕೋನೇರ‌್ಲು ಗ್ರಾಮದ ಸಮೀಪ ತೆರಳುತಿದ್ದ ವೇಳೆ ಎದುರಿನಿಂದ ಬಂದ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ಬೈಕಿನಿಂದ ಕೆಗೆ ಬಿದ್ದ ಈರೇಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.