ಲೈಂಗಿಕ ಕಿರುಕುಳ ನೀಡಿರುವ ಶಿಕ್ಷಕನನ್ನು ಬಂಧಿಸಿ

Arrest
Published on

ಬೈಲಹೊಂಗಲ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಲೈಂಗಿಕ ಕಿರುಕುಳ ನೀಡಿರುವ ಶಿಕ್ಷಕ ರಮೇಶ ಬಸನಾಯ್ಕ ತಿಗಡಿಯನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ರಾಷ್ಟ್ರೀಯ ಮಹಿಳಾ ಒಕ್ಕೂಟದಿಂದ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿಗೆ ಬುಧವಾರ ಮನವಿ ಅರ್ಪಿಸಿದರು.

ರಾಷ್ಟ್ರೀಯ ಮಹಿಳಾ ಒಕ್ಕೂಟ ಅಧ್ಯಕ್ಷೆ ದುರ್ಗಾ ಯರಝರ್ವಿ ಮಾತನಾಡಿ, ಸಮಾಜ ವಿಜ್ಞಾನದ ವಿಷಯದ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿರುವ ರಮೇಶ ತಿಗಡಿ ಎಂಬ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ ಪ್ರಕರಣ ಬೈಲಹೊಂಗಲ ಠಾಣೆಯಲ್ಲಿ ದಾಖಲಾಗಿದೆ.

ಈ ಶಿಕ್ಷಕನು ಪಟ್ಟಣದ ನಿವಾಸಿಯಾಗಿದ್ದು, ಪ್ರಕರಣ ದಾಖಲಾಗಿ ಮೂರು ದಿನ ಕಳೆದರೂ ಪೊಲೀಸರು ಇಲ್ಲಿಯವರೆಗೂ ಬಂಧಿಸಿಲ್ಲ. ಶಿಕ್ಷಕನನ್ನು 24 ಗಂಟೆಯಲ್ಲಿ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಡಿಎಸ್‌ಎಸ್ ಜಿಲ್ಲಾ ಅಧ್ಯಕ್ಷ ಮನೋಜ ಕೇಳಗೇರಿ, ಸವದತ್ತಿ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ಸವದತ್ತಿ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net