ರಾಜಶ್ರೀ ಬೀಡಿಗೆ ಸೇವಾರತ್ನ ಪ್ರಶಸ್ತಿ

rajashri bidi
Published on

ಹುಬ್ಬಳ್ಳಿ: ತಾಲೂಕಿನ ಕುರುಡಿಕೇರಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ರಾಜಶ್ರೀ ಬೀಡಿ ರಾಷ್ಟ್ರೀಯ ಸಾಧಕ ಸೇವಾರತ್ನ ಪ್ರಶಸ್ತಿಗೆ ಭಾಜರಾಗಿದ್ದಾರೆ. ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಬೆಳಗಾವಿಯಲ್ಲಿ ಇತ್ತೀಚೆಗೆ ಶ್ರೀಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗಕಲಾವಿದರ ಸಾಧಕರ ಶ್ರೀ ಮಾತಾ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net