

ಹುಬ್ಬಳ್ಳಿ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು ಹುಬ್ಬಳ್ಳಿ ತಾಲೂಕಿನ ಕುರಡಿಕೇರಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ರಾಜಶ್ರೀ ಬೀಡಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿದೆ.
ವಿಜಯಪುರದಲ್ಲಿ ಭಾನುವಾರ ಆಯೋಜಿಸಿದ್ದ ಶೈಕ್ಷಣಿಕ ಸಮ್ಮೇಳನ ಹಾಗೂ ಅಕ್ಷರದ ಅವ್ವ ಸಾವಿತ್ರಿಬಾಯಿ ಪುಲೆ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ವಿತರಿಸಲಾಯಿತು.