ಕೆಲಸದ ಒತ್ತಡದಿಂದ ಶಿಕ್ಷಕಿ ನೇಣಿಗೆ ಶರಣು

hang
Published on

ಉಡುಪಿ: ಅಲೆವೂರಿನಲ್ಲಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.

ಅಲೆವೂರಿನ ನಿವಾಸಿ ಅಮೃತಾ (32)ಆತ್ಮಹತ್ಯೆ ಮಾಡಿಕೊಂಡವರು. ನಗರದ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಎಂಟು ವರ್ಷದಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚೆಗೆ ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದೇ ಕಾರಣದಿಂದ ಭಾನುವಾರ ರಾತ್ರಿ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿ ಹಾಗೂ ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net