ಭವಿಷ್ಯದ ಪ್ರಜೆಗಳನ್ನು ರೂಪಿಸುವವರು ಶಿಕ್ಷಕರು

17 ckm 5
ಚಿಕ್ಕಮಗಳೂರಿನ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಮಂಗಳವಾರ ೬೩ನೇ ವರ್ಷದ ಶಿಕ್ಷಕರ ದಿನಾಚಾರಣೆ ಕಾರ್ಯಕ್ರಮವನ್ನು ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಟಿ.ರಾಜಶೇಖರ್ ಉದ್ಘಾಟಿಸಿದರು.
Published on

ಚಿಕ್ಕಮಗಳೂರು:

ವಿಜಯವಾಣಿ ಸುದ್ದಿಜಾಲ ಚಿಕ್ಕಮಗಳೂರು
ಭಾರತದಲ್ಲಿ ಗುರುವಿಗೆ ದೇವರ ಸ್ಥಾನ ನೀಡಲಾಗಿದೆ. ಮಕ್ಕಳಲ್ಲಿನ ಅಜ್ಞಾನದ ಕತ್ತಲನ್ನು ದೂರಮಾಡಿ ಜ್ಞಾನದ ಬೆಳಕನ್ನು ನೀಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಶ್ರಮ ಅತಿ ಮುಖ್ಯ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್ ತಿಳಿಸಿದರು.

ನಗರದ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಮಂಗಳವಾರ ೬೩ನೇ ವರ್ಷದ ಶಿಕ್ಷಕರ ದಿನಾಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರ ದಿನ ಆಚರಣೆ ಇಡೀ ದೇಶದಲ್ಲಿಯೇ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಜೀವನ ಗೋಲ್ಡನ್ ಲೈಫ್. ಪ್ರೌಢಶಿಕ್ಷಣ ಮುಗಿದ ನಂತರ ಶಾಲಾ ದಿನಗಳಿಗೆ ಹಿಂದುರುಗಿ ಬರಲು ಸಾದ್ಯವಿಲ್ಲ. ಶಿಕ್ಷಕರು ಮತ್ತು ಹಿರಿಯರ ಬಗ್ಗೆ ಗೌರವ ಬೆಳೆಸಿಕೊಂಡು ಜೀವದಲ್ಲಿ ಶಿಸ್ತನ್ನು ಬೆಳೆಸಿಕೊಂಡಾಗ ಉನ್ನತ ಸ್ಥಾನಕ್ಕೆ ಏರಲು ಸಾದ್ಯ ಎಂದರು.
ಜೆವಿಎಸ್ ಶಾಲೆಗೆ ಒಳ್ಳೆಯ ಫಲತಾಂಶ ತರಲು ಶ್ರಮಿಸಿದ ಎಲ್ಲಾ ಶಿಕ್ಷಕರಿಗೆ ಧನ್ಯವಾದ ತಿಳಿಸುತ್ತೇನೆ. ಈ ಆಚರಣೆಯನ್ನು ಇನ್ನೂ ಅದ್ದೂರಿ ಮಾಡುವ ನಿಟ್ಟಿನಲ್ಲಿ ನಮ್ಮ ಶಾಲೆಯ ಏಳಿಗೆಗಾಗಿ ದುಡಿದ ಶಿಕ್ಷಕರ ಹಲವು ಬೇಡಿಕೆಗಳನ್ನು ಈಡೇರಿಸಲು ಜಿಲ್ಲಾ ಒಕ್ಕಲಿಗರ ಸಂಘವು ತೀರ್ಮಾನಿಸಿದೆ. ಶಿಕ್ಷಕರು ಮಕ್ಕಳನ್ನು ತಮ್ಮ ಮಕ್ಕಳಂತೆ ಪ್ರೋತ್ಸಾಯಿಸಬೇಕು. ಅವರಲ್ಲಿರುವ ಪ್ರತಿಭೆಗಳನ್ನು ಹೊರತಂದು ಮುಂದಿನ ದಿನಗಳಲ್ಲಿ ದೇಶಕ್ಕೆ ಒಳ್ಳೆಯ ಪ್ರಜೆಯನ್ನು ನೀಡಬೇಕು. ಮಕ್ಕಳ ಮನಸ್ಸಿನಲ್ಲಿ ಸದಾಕಾಲ ನೆನಪಿನಲ್ಲಿ ಇರುವಂತಹ ಗುರುಗಳಾಗಬೇಕು ಎಂದು ತಿಳಿಸಿದರು.
ಜೆವಿಎಸ್ ಶಾಲೆಯು ಪ್ರಾರಂಭವಾಗಿ ೪೧ ವರ್ಷಗಳಾಗಿವೆ. ಈ ಶಾಲೆಯಲ್ಲಿ ಹಲವಾರು ಶಿಕ್ಷಕರು ತಮ್ಮ ವೃತ್ತಿ ಜೀವನವನ್ನು ಕಳೆದಿದ್ದು, ೨೫ ವರ್ಷಕ್ಕೂ ಹೆಚ್ಚು ಸೇವೆಯನ್ನು ಸಲ್ಲಿಸಿ ಇನ್ನೂ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ನಮ್ಮ ಶಾಲೆಯಲ್ಲಿ ಇದ್ದಾರೆ. ಅವರಿಗೆ ನಮ್ಮ ಅಭಿನಂದನೆಗಳು ಎಂದು ತಿಳಿಸಿದರು.
ಜಿಲ್ಲಾ ಒಕ್ಕಲಿಗರ ಸಂಘದ ಗೌರವ ಕಾರ್ಯದರ್ಶಿ ಎಂ.ಸಿ ಪ್ರಕಾಶ್ ಮಾತನಾಡಿ, ಸರ್ವಪಲ್ಲಿ ರಾಧಾಕೃಷ್ಣರವರ ಜನ್ಮದಿನವನ್ನು ಶಿಕ್ಷಕರಿಗೆ ಗೌರವ ಸಲ್ಲಿಸುವ ಸಲುವಾಗಿ ಸೆ. ೫ನ್ನು ಶಿಕ್ಷಕರ ದಿನವನ್ನಾಗಿ ಆಚರಣೆ ಮಾಡಲಾಗಿದೆ. ನಮ್ಮ ದೇಶದಲ್ಲಿ ಪ್ರತಿ ದಿನವು ಅನೇಕ ದಿನಾಚಾರಣೆಗಳು ನಡೆಯುತ್ತಿದ್ದು, ಆಯಾ ಇಲಾಖೆಗೆ ಸಂಬAದಪಟ್ಟವರು ಆಚರಿಸುತ್ತಾರೆ ಎಂದರು.
ಇದೇ ಸಂದರ್ಭದಲ್ಲಿ ಜೆವಿಎಸ್ ಶಾಲೆಯಲ್ಲಿ ೨೫ ವರ್ಷಕ್ಕೂ ಹೆಚ್ಚು ಸೇವೆ ಸಲ್ಲಿಸಿದ ಶಿಕ್ಷಕರಾದ ರಾಮೇಗೌಡ ಅವರನ್ನು ಸನ್ಮಾನಿಸಲಾಯಿತು. ನಿಕಟಪೂರ್ವ ಕಾರ್ಯದರ್ಶಿ ಐ.ಎಸ್ ಉಮೇಶ್ಚಂದ್ರ, ಮಾಜಿ ಅಧ್ಯಕ್ಷ ಬಿ.ಎಲ್.ಸಂದೀಪ್, ಉಪಾಧ್ಯಕ್ಷ ಲಕ್ಷö್ಮಣ್‌ಗೌಡ, ನಿರ್ದೇಶಕರಾದ ರವಿಕುಮಾರ್, ಕೆ.ಎಸ್.ನಾರಾಯಣ ಗೌಡ, ರತೀಶ್ ಕುಮಾರ್, ಎಂ.ಬಿ.ಆನAದ್, ಜಿ.ಎಸ್.ಚಂದ್ರಪ್ಪ, ಎಚ್.ಬಿ.ಲಕ್ಷಿö್ಮÃ, ಕೆ.ಕೆ.ವೆಂಕಟೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net