

ಧಾರವಾಡ: ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳ ಪ್ರತಿಭೆ ಗುರುತಿಸಿ ಸತ್ಕರಿಸುವ ಕಾರ್ಯ ಅತ್ಯಂತ ಶ್ಲಾಘನೀಯ. ವ್ಯಕ್ತಿಯೊಬ್ಬ ಉನ್ನತ ಸ್ಥಾನಕ್ಕೆ ಹೋಗಲು ಪ್ರಾಥಮಿಕ ಶಾಲಾ ಶಿಕ್ಷಕರು ಕಾರಣ ಎಂದು ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ತವನಪ್ಪ ಅಷ್ಟಗಿ ಹೇಳಿದರು.
ತಾಲೂಕು ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕ- ಶಿಕ್ಷಕಿಯರ ಪತ್ತು ಬೆಳೆಸುವ ಸಹಕಾರ ಸಂಘವು ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸೋಮವಾರ ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಶಿಕ್ಷಕರು, ನಿವೃತ್ತ ಶಿಕ್ಷಕರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮಾಜಿ ಮೇಯರ್ ಈರೇಶ ಅಂಚಟಗೇರಿ ಮಾತನಾಡಿ, ಸಂಘವು ಲಾಭಾಂಶವನ್ನು ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರದಂಥ ಕಾರ್ಯಕ್ರಮಗಳನ್ನು ರೂಪಿಸುತ್ತ ಬಂದಿರುವುದು ಶ್ಲಾಘನೀಯ ಎಂದರು.
ಗ್ರಾಮೀಣ ಕ್ಷೇತ್ರ ಶಿಕ್ಷಣಾಽಕಾರಿ ರಾಮಕೃಷ್ಣ ಸದಲಗಿ ಮಾತನಾಡಿ, ಜಗತ್ತಿನಲ್ಲಿ ಜ್ಞಾನಕ್ಕೆ ದೊಡ್ಡ ಶಕ್ತಿ ಇದೆ. ಶಿಕ್ಷಕರು ಪ್ರತಿದಿನವೂ ಜ್ಞಾನ ಸಂಪಾದಿಸಿ ಮಕ್ಕಳಿಗೆ ಧಾರೆ ಎರೆಯಬೇಕು ಎಂದರು.
ಸಹಕಾರ ಸಂಘದ ಅಧ್ಯಕ್ಷ ಕಾಶಪ್ಪ ದೊಡವಾಡ ಅಧ್ಯಕ್ಷತೆ ವಹಿಸಿದ್ದರು. ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರಶಿಕ್ಷಣಾಽಕಾರಿ ಉಮೇಶ ಬಮ್ಮಕ್ಕನವರ, ನಿಕಟಪೂರ್ವ ಅಧ್ಯಕ್ಷ ಗುರು ತಿಗಡಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಭಾರಿ ಪ್ರಾಚಾರ್ಯ ಸೈಯದ್ ಶೇಖ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ ಸವಾಯಿ, ಇತರರಿದ್ದರು.