ಧನಾತ್ಮಕ ಪರಿಣಾಮವಾಗುವ ಬೋಧನೆ : ಜಯಾನಂದ ಸಲಹೆ

sabhe
ಮಜಿ ವೀರಕಂಬ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಸಮಾಲೋಚನಾ ಸಭೆ ನಡೆಯಿತು. ಉಪನ್ಯಾಸಕ ಜಯಾನಂದ ಪೆರಾಜೆ, ಮುಖ್ಯಶಿಕ್ಷಕ ಮೊಹಮ್ಮದ್ ಅಶ್ರಫ್, ಮುಖ್ಯಶಿಕ್ಷಕಿ ಬೆನೆಡಿಕ್ಟ ಆಗ್ನೇಸ್ ಮಂಡೋನ್ಸಾ ಉಪಸ್ಥಿತರಿದ್ದರು.
Published on

ಬಂಟ್ವಾಳ: ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ತಾಯಿಯಿಂದ ಮಾತೃಭಾಷೆಯ ಮೂಲಕ ಕನ್ನಡ ಭಾಷೆಯಲ್ಲಿ ಸಂವಹನ ನಡೆದಾಗ ಭಾಷೆ ಗಟ್ಟಿಯಾಗುತ್ತದೆ. ಶಿಕ್ಷಕರು ಮೊದಲು ತಮ್ಮನ್ನು ತಾವು ಅರಿತು ಕೊಂಡಾಗ ವಿದ್ಯಾರ್ಥಿಗಳಲ್ಲಿ ಧನಾತ್ಮಕ ಪರಿಣಾಮಗಳನ್ನು ಉಂಟುಮಾಡಲು ಸುಲಭವಾಗುತ್ತದೆ. ತಾನು ಬದಲಾಗಿ ತನ್ನ ಜತೆಗೆ ಇತರರನ್ನು ಬೆಳೆಸುವುದೇ ಶಿಕ್ಷಕ ಧರ್ಮ ಎಂದು ಉಪನ್ಯಾಸಕ ಜಯಾನಂದ ಪೆರಾಜೆ ಹೇಳಿದರು.

ದ.ಕ.ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬದಲ್ಲಿ ಶನಿವಾರ ಕಲ್ಲಡ್ಕ ಕ್ಲಸ್ಟರ್‌ನ ಶಿಕ್ಷಕರ ಸಮಾಲೋಚನಾ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಶಿಕ್ಷಕರ ಸಮಸ್ಯೆಗಳ ಸಮಾಲೋಚನೆ ನಡೆಸಿ ಮಾರ್ಗದರ್ಶನ ಮಾಡಿದರು.

ಕಲ್ಲಡ್ಕ ಮಾದರಿ ಶಾಲೆ ಮುಖ್ಯಶಿಕ್ಷಕ ಮೊಹಮ್ಮದ್ ಅಶ್ರಫ್ ಉಪಸ್ಥಿತರಿದ್ದರು. ಮಜಿ ಶಾಲೆ ಮುಖ್ಯಶಿಕ್ಷಕಿ ಬೆನೆಡಿಕ್ಟ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿ, ಶಿಕ್ಷಕಿ ಸಂಗೀತ ಶರ್ಮ ಪಿ.ಜಿ.ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net