ಮಕ್ಕಳ ಕ್ರಿಯಾತ್ಮಕತೆ ಅನಾವರಣದಲ್ಲಿ ಶಿಕ್ಷಕರ ಕೊಡುಗೆ ಅಪಾರ

Teachers' contribution in unleashing children's creativity is immense.
ಲೋಕಾಪುರ ಪಟ್ಟಣದ ಬಸವೇಶ್ವರ ಅಂತಾರಾಷ್ಟ್ರೀಯ ಪಬ್ಲಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ಸ್ನೇಹ ಸಮ್ಮೇಳನದ ಸಂಭ್ರಮ ಸೌರಭ ಕಾರ್ಯಕ್ರಮದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. 
Published on

ಲೋಕಾಪುರ: ಪ್ರತಿಭೆ ಅನಾವರಣಕ್ಕೆ ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆಯಾಗಿದೆ ಎಂದು ಧಾರವಾಡದ ಪೊಲೀಸ್ ಇನ್‌ಸ್ಪೆಕ್ಟರ್ ಗುರುರಾಜ್ ಮೈಲಾರ ಹೇಳಿದರು.

ಪಟ್ಟಣದ ಬಸವೇಶ್ವರ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ಸ್ನೇಹ ಸಮ್ಮೇಳನದ ಸಂಭ್ರಮ ಸೌರಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೆಲವು ಮಕ್ಕಳು ಒಂದೇ ವಿಷಯಕ್ಕೆ ಸೀಮಿತವಾಗಿ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಾರೆ. ಮಕ್ಕಳು ಒಂದೇ ವಿಷಯಕ್ಕೆ ಸೀಮಿತವಾಗದೆ, ಉತ್ತಮ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸ ರೂಢಿಸಿಕೊಳ್ಳಬೇಕು. ಮಕ್ಕಳ ಕ್ರಿಯಾತ್ಮಕತೆ ಗುರುತಿಸಿ, ಅದನ್ನು ಹೊರತರುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಇಂತಹ ಕಾರ್ಯವನ್ನು ಬಿವಿವಿ ಸಂಘದ ಅಡಿಯಲ್ಲಿರುವ ಶಿಕ್ಷಣ ಸಂಸ್ಥೆಗಳು ಮಾಡುತ್ತಿವೆ ಎಂದರು.

ವಿದ್ಯಾಗಿರಿಯ ಬಿಪ್ಸ್ ಪ್ರಾಚಾರ್ಯ ಸುರೇಶ ಹೆಗಡೆ ಮಾತನಾಡಿ, ಮಕ್ಕಳ ಸರ್ವತೋಮುಖ ಪ್ರಗತಿಗೆ ಲೋಕಾಪುರದ ಬಿಪ್ಸ್ ಶಾಲೆ ಶ್ರಮಿಸುತ್ತಿದ್ದು, ಮಕ್ಕಳಿಗೆ ಅನೇಕ ಅವಕಾಶಗಳನ್ನು ಒದಗಿಸುತ್ತಿದೆ. ಇಂದಿನ ಕಾರ್ಯಕ್ರಮವನ್ನು ಮಕ್ಕಳೇ ನಿರ್ವಹಿಸುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದರು.

ಶಾಲಾ ವಾರ್ಷಿಕ ವರದಿ ವಾಚಿಸಿದ ಪ್ರಾಚಾರ್ಯ ಪರಶುರಾಮ ವನಸಿ, ಶಾಲೆಯ ಕಳೆದ 3 ವರ್ಷದ ಸತತ ಬೆಳವಣಿಗೆಯಿಂದ ಹೊರ ಜಗತ್ತಿಗೆ ಸ್ಪರ್ಧೆ ಒಡ್ಡುವ ರೀತಿ ಬೆಳೆಯುತ್ತಿದೆ ಎಂದರು.

ವಿವಿಧ ಸಾಧನೆಗೈದ ಮಕ್ಕಳಿಗೆ ಸನ್ಮಾನ ಮಾಡಲಾಯಿತು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಬಿಪ್ಸ್‌ನ ವಿವಿಧ ಶಾಲೆಯ ಪ್ರಾಚಾರ್ಯರು, ಶಿಕ್ಷಕರು, ಪಾಲಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net