ಮೈಸೂರು ಮುಕ್ತ ವಿವಿಯಲ್ಲಿ ಶಿಕ್ಷಕ ದಿನಾಚರಣೆ

teachers day
Published on

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ವತಿಯಿಂದ ಮಂಗಳವಾರ ಕಾವೇರಿ ಸಭಾಂಗಣದಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು.

ಜಮೈಕಾ ತಾಂತ್ರಿಕ ವಿಶ್ವವಿದ್ಯಾಲಯದ ನಿವೃತ್ತ ಉಪಾಧ್ಯಕ್ಷ ಎ.ಬಿ. ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಮಹತ್ವದ ಪಾತ್ರ ನಿರ್ವಹಿಸುತ್ತಾರೆ. ನನ್ನ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸಿದ್ದರು. ಶಿಕ್ಷಕರು ನನಗೆ ನೀಡಿದ ಮಾರ್ಗದರ್ಶನವನ್ನು ಇಂದಿಗೂ ನೆನೆಸಿಕೊಳ್ಳುತ್ತೇನೆ ಎಂದರು.

ಮುಕ್ತ ವಿವಿಯ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಎನ್. ವಿಕ್ರಮ್ ರಾಜ್ ಅರಸ್ ಮಾತನಾಡಿ, ದೇಶಾದ್ಯಂತ ಮಾಜಿ ರಾಷ್ಟ್ರಪತಿ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವಾಗಿ ಆಚರಿಸಲಾಗುತ್ತಿದೆ. ರಾಧಾಕೃಷ್ಣನ್ ತತ್ವಶಾಸ್ತ್ರದಲ್ಲಿ ಅಪಾರವಾದ ಪಾಂಡಿತ್ಯವನ್ನು ಹೊಂದಿದ್ದರು. ಶಿಕ್ಷಕರಾಗಿ ಅವರ ಸಾಧನೆ ಅದ್ವಿತೀಯವಾದದ್ದು ಎಂದರು.

ವೇದಿಕೆಯಲ್ಲಿ ಕುಲಸಚಿವ ಪ್ರೊ.ಕೆ.ಎಲ್.ಎನ್. ಮೂರ್ತಿ, ಅಧ್ಯಯನ ಕೇಂದ್ರದ ಡೀನ್ ಪ್ರೊ.ಎಂ.ರಾಮನಾಥಂ ನಾಯ್ಡು, ಶೈಕ್ಷಣಿಕ ಡೀನ್ ಲಕ್ಷ್ಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net