

ಬೆಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ಇಂದಿರಾಗಾಂಧಿ ರಾಷ್ಟ್ರೀಯ ಕಲಾಕೇಂದ್ರ (ಬೆಂಗಳೂರು ಪ್ರಾದೇಶಿಕ ಕೇಂದ್ರ) ವತಿಯಿಂದ ಗುರುವಾರ (ಸೆ. 5) ಬೆಳಗ್ಗೆ 11.30ಕ್ಕೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಿದೆ.
ಕೇಂದ್ರದ ಸಮ್ಮೇಳನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಮಯ್ಯ ಇನ್‌ಸ್ಟಿಟ್ಯೂಟ್ ಆ್ ಮ್ಯಾನೇಜ್ಮೆಂಟ್‌ನ ನಿರ್ದೇಶಕಿ ಡಾ. ಮಾನಸಾ ನಾಗಭೂಷಣಂ ಅವರು ‘ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಜಾಗೃತಿ ಮೂಡಿಸುವಲ್ಲಿ ಶಿಕ್ಷಕರ ಪಾತ್ರ’ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ. ವುಮೆನ್ಸ್ ಪೀಸ್ ಲೀಗ್ ಸ್ಕೂಲ್‌ನ ಮುಖ್ಯ ಶಿಕ್ಷಕಿ ಎಂ. ಕಲಾರಾಣಿ, ಇಂದಿರಾಗಾಂಧಿ ರಾಷ್ಟ್ರೀಯ ಕಲಾಕೇಂದ್ರ ಬೆಂ.ಕೇಂದ್ರದ ಪ್ರಾದೇಶಿಕ ನಿರ್ದೇಶಕ ಡಿ. ಮಹೇಂದ್ರ ಇತರರು ಭಾಗವಹಿಸಲಿದ್ದಾರೆ.