ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ

Teacher's Day celebration in Madikeri
Published on

ಮಡಿಕೇರಿ:

ಶಿಕ್ಷಕರು ಮಕ್ಕಳ ಹೃದಯದಲ್ಲಿ ಸದಾ ಇರುತ್ತಾರೆ. ಮಕ್ಕಳ ಮನಸ್ಸಿನಿಂದ ಶಿಕ್ಷಕರನ್ನು ತೆಗೆಯಲು ಸಾಧ್ಯವಿಲ್ಲ. ಆ ದಿಸೆಯಲ್ಲಿ ಶಿಕ್ಷಕರೇ ದೇವರು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಸಂಯುಕ್ತಾಶ್ರಯದಲ್ಲಿ ಕೊಡಗು ಗೌಡ ಸಮಾಜದ ಮುಖ್ಯ ಸಭಾಂಗಣದಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಕ್ಷಕರು ಮಕ್ಕಳಲ್ಲಿ ಹೆಚ್ಚಿನ ಪ್ರಭಾವ ಬೀರುತ್ತಾರೆ. ಶಿಕ್ಷಕರ ಪ್ರತಿಯೊಂದು ಗುಣವೂ ಮಕ್ಕಳ ಮೇಲೆ ಪರಿಣಾಮ ಉಂಟುಮಾಡುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರ ಮಾರ್ಗದರ್ಶನ ಸದಾ ಸ್ಮರಣೀಯವಾಗಿದೆ. ಕೊಡಗು ಜಿಲ್ಲೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ನಾಲ್ಕನೇ ಸ್ಥಾನ ಪಡೆದಿರುವುದು ಹಾಗೂ ಗುಣಮಟ್ಟದ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆದಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.

ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಪ್ರೀತಿ ಮತ್ತು ವಿಶ್ವಾಸ ಮೂಡಿಸಿ ಶಿಕ್ಷಣ ನೀಡುವಂತಾಗಬೇಕು. ಶಿಕ್ಷಕರ ವೃತ್ತಿಗೆ ತನ್ನದೇ ಆದ ಗೌರವವಿದ್ದು, ಪ್ರತಿಯೊಬ್ಬರೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಸದಾ ಸ್ಮರಿಸುತ್ತಾರೆ. ಶಿಕ್ಷಕರ ವೃತ್ತಿ ಹೆಚ್ಚಿನ ಜವಾಬ್ದಾರಿ ಹೊಂದಿದೆ. ಆ ದಿಸೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕೊಡಗು ಜಿಲ್ಲೆಯನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಶಿಕ್ಷಕರು ಸೇರಿದಂತೆ ಎಲ್ಲರೂ ಶ್ರಮಿಸಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ೭ನೇ ಪರಿಷ್ಕೃತ ವೇತನದಡಿ ವೇತನ ಹೆಚ್ಚಳ ಮಾಡಿದೆ. ಹಾಗೆಯೇ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಬಡ್ತಿ ಸಂಬAಧ ಹಲವು ಮಹತ್ತರ ಬದಲಾವಣೆಗೆ ಮುಂದಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಪ್ರತಿಯೊಂದು ಕ್ಷೇತ್ರದಲ್ಲೂ ಬದಲಾವಣೆ ಮತ್ತು ಸುಧಾರಣೆಗೆ ಪ್ರಯತ್ನಿಸಿದೆ ಎಂದು ಹೇಳಿದರು.

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ ರಾಷ್ಟçದ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಮಕ್ಕಳ ಮೇಲೆ ಶಿಕ್ಷಕರು ಹೆಚ್ಚಿನ ಪ್ರಭಾವ ಮತ್ತು ಪರಿಣಾಮ ಬೀರುತ್ತಾರೆ. ಆ ನಿಟ್ಟಿನಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಮಾತನಾಡಿ ಸಮಾಜದ ಅಭಿವೃದ್ಧಿಗೆ ಅನ್ನದಾನ ಮತ್ತು ವಿದ್ಯಾದಾನ ಮಹತ್ತರವಾಗಿದ್ದು, ವಿದ್ಯಾದಾನ ಮಾಡುತ್ತಿರುವ ಶಿಕ್ಷಕರ ವೃತ್ತಿ ಹೆಚ್ಚಿನ ಮೌಲ್ಯ ಹೊಂದಿದೆ. ಅಜ್ಞಾನದಿಂದ ಸುಜ್ಞಾನದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ ಮಾರ್ಗದರ್ಶನ ತೋರುವುದೇ ಶಿಕ್ಷಕರ ವೃತ್ತಿಯಾಗಿದೆ. ಪ್ರತಿಯೊಬ್ಬರೂ ಗುರುಗಳನ್ನು ಸದಾ ಸ್ಮರಿಸುತ್ತಾರೆ. ಮಕ್ಕಳ ಜೀವನ ರೂಪಿಸುವವರು ಶಿಕ್ಷಕರು ಆಗಿದ್ದಾರೆ ಎಂದು ಹೇಳಿದರು.
ಮೈಸೂರಿನ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕÀ ನೀಲಗಿರಿ ಎಂ.ತಳವಾರ್ ಮಾತನಾಡಿ ಶಿಕ್ಷಕರ ನಿಜವಾದ ಆಸ್ತಿ ವಿದ್ಯಾರ್ಥಿಗಳು, ಮಹಾನ್ ಕಾರ್ಯ ಮಾಡುವವರು ಮಾತ್ರ ದೊಡ್ಡವರಲ್ಲ, ಮಹಾನ್ ಕಾರ್ಯ ಮಾಡಲು ಪ್ರೇರೇಪಿಸುವ ಶಿಕ್ಷಕರು ಕೂಡ ಮಹಾತ್ಮರು ಎಂದರೆ ತಪ್ಪಾಗಲಾರದು. ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣವನ್ನು ನೀಡಿ, ಕಟ್ಟುನಿಟ್ಟಿನ ಜೀವನ ಶೈಲಿಯಿಂದ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ಮಕ್ಕಳಿಗೆ ಮಾಹಿತಿ ಮಾರ್ಗದರ್ಶನ ನೀಡುವಂತಾಗಬೇಕು ಎಂದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಡಿವೈಎಸ್‌ಪಿ ಮಹೇಶ್ ಕುಮಾರ್, ಕೂಡಿಗೆ ಡಯಟ್‌ನ ಪ್ರಾಂಶುಪಾಲ ಎಂ.ಚAದ್ರಕಾAತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕÀ ಸಿ.ರಂಗಧಾಮಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳಾ, ಶಿಕ್ಷಣಾಧಿಕಾರಿ ಹಾಗೂ ನೋಡಲ್ ಅಧಿಕಾರಿ ಎಂ.ಮಹದೇವಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ. ದೊಡ್ಡೇಗೌಡ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ರಾಜ್ಯ ಸರ್ಕಾರಿ ನೌಕರರ ಕೊಡಗು ಜಿಲ್ಲಾ ಸಂಘದ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್, ಪದವಿ ಪೂರ್ವ ಕಾಲೇಜು ಜಿಲ್ಲಾ ಸಂಘದ ಅಧ್ಯಕ್ಷರಾದ ಪಿ.ಎಂ.ದೇವಕಿ, ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ ಫಿಲೀಪ್ ವಾಸ್ ಮತ್ತಿತರರು ಇದ್ದರು.
ಇದೇ ವೇಳೆ ಉತ್ತಮ ಸೇವೆ ಸಲ್ಲಿಸಿದ ಒಂಬತ್ತು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶದ್ತಿ ಪ್ರದಾನ ಮಾಡಲಾಯಿತು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net