ಶಿಕ್ಷಕರ ದಿನಾಚರಣೆ

SRK
Published on

ಬೆಂಗಳೂರು: ಭಾರತ ರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನಾಚರಣೆ ಅಂಗವಾಗಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಬೆಂಗಳೂರು ಉತ್ತರ ಜಿಲ್ಲೆ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಗುರುವಾರ (ಸೆ. 5) ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಂಡಿದೆ.

ನಗರದ ಶಿಕ್ಷಕರ ಸಧನದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್, ಕೇಂದ್ರದ ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಮತ್ತು ಕಾರ್ಮಿಕ ಹಾಗೂ ಉದ್ಯೋಗ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅಧ್ಯಕ್ಷತೆ ವಹಿಸಲಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಇತರರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net