ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿ, ಶಾಸಕ ಹಿಟ್ನಾಳ ಹೇಳಿಕೆ

teachers day celebrtaion in koppal mla raghavendra hitnala
Published on

ಕೊಪ್ಪಳ: ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ಮಕ್ಕಳೇ ಮುಂದಿನ ಪ್ರಜೆಗಳು ಎಂದು ಶಾಸಕ ರಾವೇಂದ್ರ ಹಿಟ್ನಾಳ ಹೇಳಿದರು.

ಜಿಲ್ಲಾಡಳಿತದಿಂದ ನಗರದ ಸಾಹಿತ್ಯ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕರು ದೇಶದ ನಿಮಾರ್ಪಕರು. ಡಾ.ಸರ್ವಪಲ್ಲಿ ರಾಧಕೃಷ್ಣನ್​ ಅವರ ಜನ್ಮ ದಿನ ಅಂಗವಾಗಿ ಶಿಕ್ಷಕರ ದಿನಾಚರಣೆ ಮಾಡುತ್ತಿದ್ದೇವೆ. ನಮ್ಮ ಭಾಗಕ್ಕೆ 371(ಜೆ) ಸೌಲಭ್ಯ ಸಿಕ್ಕಿದೆ. ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಸಿಕ್ಕಿದ್ದು, ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು. ಕಳೆದ ವರ್ಷ ಎಸ್ಸೆಸ್ಸೆಲ್ಸಿ ಲಿತಾಂಶ ಕುಸಿದಿದೆ. ಸುಧಾರಣೆಗೆ ಕ್ರಮ ಕೈಗೊಳ್ಳಿ. ಶಿಕ್ಷಕರು ಶ್ರಮಪಟ್ಟು ಮಕ್ಕಳ ಭವಿಷ್ಯ ರೂಪಿಸಿ. ನಿಮ್ಮ ಬೇಡಿಕೆಯಂತೆ 7ನೇ ವೇತನ ಆಯೋಗ ವರದಿ ಜಾರಿಗೊಳಿಸಿದೆ. ಗುರು ಭವನ ನಿರ್ಮಾಣ ಕಾಮಗಾರಿಗೆ ವೇಗ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗುವುದೆಂದರು.

ವಿಪ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ಯಾವುದೇ ಒಬ್ಬ ವ್ಯಕ್ತಿ ಉತ್ತಮ ಸ್ಥಾನಕ್ಕೇರುವಲ್ಲಿ ಗುರುವಿನ ಪಾತ್ರ ಬಹುಮುಖ್ಯ. ನಾನು ಇಂದು ಈ ಸ್ಥಾನಕ್ಕೆ ಬರುವಲ್ಲಿಯೂ ನನ್ನ ಶಿಕ್ಷಕರ ಪಾತ್ರವಿದೆ. ಶಿಕ್ಷಕ ವೃತ್ತಿ ಪವಿತ್ರವಾದದ್ದು. ಗಡಿ ಭಾಗದ ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗಬೇಕು. ಅಧಿಕಾರಿಗಳು ಈ ಬಗ್ಗೆ ಗಮನವಹಿಸಿ. ಕೆಲ ಶಿಕ್ಷಕರು ತಮ್ಮದೇ ಬಳಗ ಕಟ್ಟಿಕೊಂಡು ಸರ್ಕಾರಿ ಶಾಲೆ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಶ್ಲಾನೀಯ ಎಂದರು.

ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ಮಾತನಾಡಿ, ಕಳೆದ ವರ್ಷದ ಎಸ್ಸೆಸ್ಸೆಲ್ಸಿ ಲಿತಾಂಶ ಕಡಿಮೆಯಾಗಿದೆ. ಶಿಕ್ಷಕರೊಂದಿಗೆ ಸಭೆ ನಡೆಸಿ ಚರ್ಚಿಸಿ ಕಾರಣ ಮತ್ತು ಪರಿಹಾರ ಕಂಡುಕೊಂಡಿದ್ದೇವೆ. ಸಾಮಾಜಿಕ ಬದಲಾವಣೆ ಮಾಡುವ ಶಕ್ತಿ ಶಿಕ್ಷಕರಲ್ಲಿದೆ. ಹೊಸ ಪ್ರಯೋಗಗಳನ್ನು ಅನುಸರಿಸಿ ಮಕ್ಕಳ ಕಲಿಕೆಗೆ ಪ್ರೋತ್ಸಾಹಿಸಿ ಎಂದು ಸಲಹೆ ನೀಡಿದರು.

ನಗರಸಭೆ ಅಧ್ಯಕ್ಷ ಅಮ್ಜದ್​ ಪಟೇಲ್​ ಮಾತನಾಡಿ, ಡಾ.ರಾಧಾಕೃಷ್ಣನ್​ ಶಿಕ್ಷಣ ತಜ್ಞರು. ರಾಷ್ಟ್ರಪತಿ, ಉಪ ರಾಷ್ಟ್ರಪತಿಯಾಗಿ ದೇಶದ ಸೇವೆ ಮಾಡಿದ್ದಾರೆ. ತಾಯಿ ಮಗುವಿಗೆ ಜನ್ಮ ನೀಡಿದರೆ, ಶಿಕ್ಷಕ ಭವಿಷ್ಯ ನೀಡುತ್ತಾನೆ. ಶಿಕ್ಷಣಕ್ಕೆ ಮಹತ್ವವಿದೆ. ಅದನ್ನು ಎಲ್ಲರೂ ಅರಿಯಬೇಕು ಎಂದರು.

ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ್​ ಪಾಟೀಲ್​, ಡಿಡಿಪಿಐ ಶ್ರೀಶೈಲ ಬಿರಾದಾರ, ಜಿಲ್ಲಾ ಸರ್ಕಾರಿ ನೌಕರರ ಸಂದ ಪ್ರ.ಕಾ. ಶಿವಪ್ಪ ಜೋಗಿ, ವಿಕಲಚೇತನ ಸರ್ಕಾರಿ ನೌಕರರ ಸಂದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ, ಶಿಕ್ಷಣಾಧಿಕಾರಿಗಳ ಸಂದ ಜಿಲ್ಲಾಧ್ಯಕ್ಷ ಬಾಬುಸಾಬ ಲೈನದಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂದ ಜಿಲ್ಲಾಧ್ಯಕ್ಷ ಶರಣಬಸನಗೌಡ ಪಾಟೀಲ್​, ಬೋಧಕೇತರ ನೌಕರರ ಸಂದ ಜಿಲ್ಲಾಧ್ಯಕ್ಷ ಶಿವಶಂಕ್ರಪ್ಪ ಮರಡಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಾರುತಿ ಮ್ಯಾಗಳಮನಿ, ಬಿಇಒ ಶಂಕ್ರಯ್ಯ ಟಿ.ಎಸ್​. ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net