ಸೆ.6ರಂದು ಶಿಕ್ಷಕರ ‘ಜಿಲ್ಲಾ ಮಟ್ಟದ ಕವಿಗೋಷ್ಠಿ’

Published on

ಮೈಸೂರು: ಅದಮ್ಯ ರಂಗಶಾಲೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಾಹಿತಿ ನಾಡೋಜ ಡಾ.ದೇಜಗೌ ಸಂಸ್ಮರಣಾರ್ಥ ಶಿಕ್ಷಕರ ದಿನಾರಣೆ ಅಂಗವಾಗಿ ಸೆ.6ರಂದು ‘ಜಿಲ್ಲಾ ಮಟ್ಟದ ಕವಿಗೋಷ್ಠಿ’ ಆಯೋಜಿಸಲಾಗಿದೆ.

ಯಾವುದೇ ವಯೋಮಾನದ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು, ಪದವಿ ಪೂರ್ವ ಉಪನ್ಯಾಸಕರು, ಪದವಿ ಕಾಲೇಜಿನ ಪ್ರಾಧ್ಯಾಪಕ ಯಾವುದೇ ವಸ್ತು ವಿಷಯ ಕುರಿತು ರಚಿಸಿದ, ತಮ್ಮ ಸ್ವ-ರಚಿತ 20 ಸಾಲುಗಳ ಮಿತಿಯೊಳಗಿನ ಎರಡು ಕವಿತೆಗಳು, ಗಜಲ್ಗಳನ್ನು ಅಥವಾ 6 ಸಾಲಿನ ಮಿತಿಯೊಳಗಿನ ಆರು ಚುಟುಕು, ಹನಿಗವಿತೆಗಳನ್ನು ಕಳುಹಿಸಬಹುದು. ಆಯ್ಕೆಯಾದ ಕವನಗಳನ್ನು ಜಿಲ್ಲಾ ಮಟ್ಟದ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಅವಕಾಶ ಮಾಡಿಕೊಡಲಾಗುವುದು. ಭಾಗವಹಿಸುವ ಎಲ್ಲ ಕವಿಗಳಿಗೂ ಸಮಾರಂಭದಲ್ಲಿ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುವುದು ಎಂದು ಅದಮ್ಯ ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ ತಿಳಿಸಿದ್ದಾರೆ.

ಆಸಕ್ತರು ಸೆ.3ರೊಳಗೆ ಟಿ.ಸತೀಶ್‌ಜವರೇಗೌಡ, ಗೌರವ ಕಾರ್ಯದರ್ಶಿ, ಅದಮ್ಯ ರಂಗಶಾಲೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿ, ವಿಜಯನಗರ, ಮೈಸೂರು ಇಲ್ಲಿಗೆ ಕಳುಹಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net