

ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಕೆಎಲ್ಇ ಸಂಸ್ಥೆಯ ಎಚ್.ಎಫ್. ಕಟ್ಟಿಮನಿ ಕನ್ನಡ ಪ್ರೌಢಶಾಲೆಯಲ್ಲಿ ಶ್ರೀ ಸಿದ್ಧಾರೂಢ ಮಠ ಟ್ರಸ್ಟ್ ವತಿಯಿಂದ ಶಿಕ್ಷಕರ ದಿನ ಆಚರಿಸಲಾಯಿತು. ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಕೆಎಲ್ಇ ಸಂಸ್ಥೆಯ ಜೆಜಿಟಿಟಿಐ ಕಾಲೇಜು, ಕಟ್ಟಿಮನಿ ಶಾಲೆಯ ಶಿಕ್ಷಕರನ್ನು ಸನ್ಮಾನಿಸಲಾಯಿತು. ಅತಿಥಿಯಾಗಿದ್ದ ಸಿದ್ಧಾರೂಢ ಮಠ ಟ್ರಸ್ಟ್ ಕಮಿಟಿ ಅಧ್ಯಕ್ಷ ಚನ್ನವಿರ ಮುಂಗರವಾಡಿ ಮಾತನಾಡಿ, ಡಾ. ರಾಧಾಕೃಷ್ಣನ್ ಅವರ ಆದರ್ಶ ಗುಣಗಳನ್ನು ಪಾಲಿಸುವುದರೊಂದಿಗೆ ಶಿಕ್ಷಣ ರಂಗದಲ್ಲಿ ಮಹತ್ವದ ಬದಲಾವಣೆ ತರಬಹುದು ಎಂದರು.
ಶಾಲೆಯ ಸ್ಥಾನಿಕ ಆಡಳಿತ ಮಂಡಳಿ ಚೇರ್ಮನ್ ಮಂಜುನಾಥ ಮುನವಳ್ಳಿ, ಸದಸ್ಯರಾದ ಜಿ.ಐ. ಬಿಜಾಪುರ, ಎಂ.ಬಿ. ಕರಡಿ, ಟ್ರಸ್ಟ್ ಜಂಟಿ ಕಾರ್ಯಾಧ್ಯಕ್ಷ ವಿನಾಯಕ ಘೋಡಕೆ, ಮ್ಯಾನೇಜರ್ ಈರಣ್ಣ ತುಪ್ಪದ ಇತರರು ಉಪಸ್ಥಿತರಿದ್ದರು.