ಶಿಕ್ಷಕರ ನೇಮಕಾತಿ ಉದ್ಯೋಗ ಮೇಳ 14ರಂದು

3 HVR 7
Published on

ಹಾವೇರಿ: ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಸಮಿತಿ ವತಿಯಿಂದ ಮೇ 14ರಂದು ಬೆಳಗ್ಗೆ 9 ಗಂಟೆಗೆ ಧಾರವಾಡದ ಶಿವಾಜಿ ಸರ್ಕನ್‌ನ ಭಾರತ್ ಹೈಸ್ಕೂಲ್ ಆವರಣದಲ್ಲಿ 16ನೇ ರಾಜ್ಯಮಟ್ಟದ ಖಾಸಗಿ ಶಾಲಾ- ಕಾಲೇಜು ಶಿಕ್ಷಕರ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ನಾಗರಾಜ ಎಚ್.ಎನ್. ಹೇಳಿದರು.
ಪತ್ರಿಕಾ ಭವನದಲ್ಲಿ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧೆಡೆ 2000ಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಮೇಳದಲ್ಲಿ ನೂರಾರು ಸಂಸ್ಥೆಗಳು, ಉದ್ಯೋಗಾಕಾಂಕ್ಷಿಗಳು ಭಾಗವಹಿಸಲಿದ್ದಾರೆ. ಉನ್ನತ ಶಿಕ್ಷಣದ ಕನಸಿಗೆ ಸಲಹೆಯನ್ನೂ ನೀಡಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net