ಬಲಿಷ್ಠ ರಾಷ್ಟç ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಶಾರದಾ ಪರ‍್ಯಾನಾಯ್ಕ್

5bdvt1
ಭದ್ರಾವತಿ ದೈವಜ್ಞ ಸಭಾಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆಯನ್ನು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪರ‍್ಯಾನಾಯ್ಕ್ ಉದ್ಘಾಟಿಸಿದರು. ಬಿ.ಕೆ.ಮೋಹನ್, ಶ್ರುತಿ ವಸಂತಕುಮಾರ್, ಸರ್ವಮಂಗಳಾ ಭೈರಪ್ಪ ಸೇರಿ ಇತರರಿದ್ದರು.
Published on

ಭದ್ರಾವತಿ: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಬಲಿಷ್ಠ ರಾಷ್ಟç ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಶಿಕ್ಷಕರ ಪಾತ್ರ ಸಾಕಷ್ಟಿದೆ ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪರ‍್ಯಾನಾಯ್ಕ ಹೇಳಿದರು.

ಮಂಗಳವಾರ ನಗರದ ದೈವಜ್ಞ ಸಭಾ ಭವನದಲ್ಲಿ ಬಿಇಒ ಕಚೇರಿ, ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿತಿಂದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಮಾನಸಿಕ ಸ್ಥಿತಿಯನ್ನು ಅರಿತು ಶಿಕ್ಷಣ ನೀಡಿ ಉತ್ತಮ ಪ್ರಜೆಯನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕರದು. ವಿದ್ಯಾರ್ಥಿಗಳ ಸರಿ-ತಪ್ಪುಗಳನ್ನು ತಿದ್ದುವ, ಸಮಾಜ ಗುರುತಿಸುವ ವ್ಯಕ್ತಿಯನ್ನಾಗಿ ಮಾಡಿ ಅವರ ಜೀವನ ಸಾರ್ಥಕಗೊಳಿಸುವವರೆಗೂ ಶಿಕ್ಷಕರ ಪಾತ್ರ ಅಮೂಲ್ಯವಾದುದು ಎಂದರು.
ನಗರಸಭಾ ಸದಸ್ಯ ಬಿ.ಕೆ.ಮೋಹನ್ ಮಾತನಾಡಿ, ಸರ್ಕಾರಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಕಡೆಗೆ ಚಿಂತನೆ ನಡೆಸದಿರುವುದು ನಿಜಕ್ಕೂ ಬೇಸರದ ಸಂಗತಿ. ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಪಡೆಯಲು ಬರುವ ಆರ್ಥಿಕವಾಗಿ ಹಿಂದುಳಿದ ಬಡಮಕ್ಕಳಿಗೆ ಸ್ಪಂದಿಸುವ ಕೆಲಸ ಶಿಕ್ಷಕರು ಮಾಡಬೇಕು ಎಂದರು.
ನಿವೃತ್ತಿ ಹೊಂದಿದ ೫೨ ಶಿಕ್ಷಕರನ್ನು ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ನಿವೃತ್ತ ಸಹನಿರ್ದೇಶಕ ಎಚ್.ಮಂಜುನಾಥ್ ವಿಶೇಷ ಉಪನ್ಯಾಸ ನೀಡಿದರು.
ನಗರಸಭೆ ಅಧ್ಯಕ್ಷೆ ಶ್ರುತಿ ವಸಂತಕುಮಾರ್, ಉಪಾಧ್ಯಕ್ಷೆ ಸರ್ವಮಂಗಳಾ ಬೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್, ಬಿಇಒ ಎ.ಕೆ.ನಾಗೇಂದ್ರಪ್ಪ, ತಾಪಂ ಇಒ ಎಂ.ಗAಗಣ್ಣ, ತಾಲೂಕು ಕಚೇರಿ ಅಽಕಾರಿ ರಾಧಾಕೃಷ್ಣ ಭಟ್, ಉದ್ಯಮಿ ಬಿ.ಕೆ.ಜಗನ್ನಾಥ್, ಲಯನ್ಸ್ ರಾಜೇಶ್, ಮಹದೇವಪ್ಪ, ಬಸವರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net