ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ನಿರ್ಣಾಯಕ: ಅರುಣ್ ಪ್ರದೀಪ್ ಡಿಸೋಜ ಹೇಳಿಕೆ

Kin_sanmana (1)
Published on

ಕಿನ್ನಿಗೋಳಿ: ಮಕ್ಕಳನ್ನು ಕೇವಲ ಶೈಕ್ಷಣಿಕ ಕಾರ್ಯಕ್ರಮಗಳಿಗಷ್ಟೇ ಸೀಮಿತಗೊಳಿಸದೆ ಅವರಲ್ಲಿನ ಪ್ರತಿಭೆಗಳನ್ನು ಹೊರ ತರಲು ಪಾಲಕರು ಹಾಗೂ ಶಿಕ್ಷಕರು ಗಮನ ಹರಿಸಬೇಕು. ಮಕ್ಕಳ ಸಾಂಸ್ಕೃತಿಕ ಚಟುವಟಿಕೆಗಳ ಅನಾವರಣಕ್ಕೆ ಮಕ್ಕಳ ದಿನಾಚರಣೆ ಉತ್ತಮ ವೇದಿಕೆ ಎಂದು ಮೂಲ್ಕಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಅರುಣ್ ಪ್ರದೀಪ್ ಡಿಸೋಜ ಹೇಳಿದರು.

ಶಾಂತಿನಗರ ಬ್ರೈಟ್ ಫ್ಯೂಚರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬ್ರೈಟ್ ಫ್ಯೂಚರ್ ಎಜ್ಯುಕೇಶನಲ್ ಹಾಗೂ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಟಿ.ಎ.ಹನೀಫ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಕಾಶ್ ಆಚಾರ್ಯ ಕಿನ್ನಿಗೋಳಿ ಹಾಗೂ ಫಿಸಿಯೋಥೆರಪಿ ವೈದ್ಯಕೀಯ ವಿದ್ಯಾರ್ಥಿನಿ ಪೂಜಾಶ್ರೀ ವಿ. ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು.

ಖಿಲ್‌ರಿಯಾ ಜುಮಾ ಮಸೀದಿ ಅಧ್ಯಕ್ಷ ಎ.ಬಿ.ಅಬೂಬಕ್ಕರ್, ತಾಪಂ ಮಾಜಿ ಸದಸ್ಯ ದಿವಾಕರ ಕರ್ಕೇರ, ಕಿನ್ನಿಗೋಳಿ ಗ್ರಾಪಂ ಮಾಜಿ ಅಧ್ಯಕ್ಷ ಟಿ.ಎಚ್.ಮಯ್ಯದ್ದಿ, ಶ್ರೀ ಮೂಕಾಂಬಿಕಾ ದೇವಸ್ಥಾನ ಧರ್ಮದರ್ಶಿ ವಿವೇಕಾನಂದ, ಶಾಲಾ ಮುಖ್ಯಶಿಕ್ಷಕಿ ಶ್ರೀಕಲಾ, ಬ್ರೈಟ್ ಫ್ಯೂಚರ್ ಎಜುಕೇಶನಲ್ ಹಾಗೂ ಚಾರಿಟೆಬಲ್ ಟ್ರಸ್ಟ್ ಸಂಚಾಲಕ ಟಿ.ಕೆ.ಅಬ್ದುಲ್ ಖಾದರ್, ಕೋಶಾಧಿಕಾರಿ ಜೆ.ಎಚ್.ಜಲೀಲ್, ಲೆಕ್ಕಪರಿಶೋಧಕ ಅಸ್ಕರ್ ಅಲಿ, ಟ್ರಸ್ಟ್ ಸದಸ್ಯರಾದ ಇಕ್ಬಾಲ್ ಚೋಟರಿಕೆ, ನವಾಝ್ ಕಲ್ಕರೆ, ನೂರುದ್ದೀನ್ ಉಪಸ್ಥಿತರಿದ್ದರು. ಸುನೈನಾ ಸ್ವಾಗತಿಸಿದರು. ಅಶ್ವಿನಿ ವಂದಿಸಿದರು. ಶೈಲಜಾ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net