'ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಉತ್ತಮ ನಾಯಕತ್ವ ಗುಣ ಬೆಳೆಸಬೇಕು'

'Teachers should develop discipline, restraint, good leadership qualities in students'
Published on

ಮಡಿಕೇರಿ:

ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಉತ್ತಮ ನಾಯಕತ್ವ ಗುಣ ಹಾಗೂ ದೇಶದ ಏಕತೆ ಮತ್ತು ಸಮಗ್ರತೆಗಾಗಿ ಅವರಲ್ಲಿ ಭ್ರಾತೃತ್ವ ಬೆಳೆಸುವ ಮೂಲಕ ಸಮಾಜದ ಉತ್ತಮ ಹಾಗೂ ಜವಾಬ್ದಾರಿ ನಾಗರಿಕರನ್ನಾಗಿ ರೂಪಿಸಲು ಶ್ರಮಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಕರೆ ಹೇಳಿದರು. ತಾಲೂಕಿನ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಶಿಕ್ಷಕರಿಗೆ ಒಂದು ವಾರ ಕಾಲ ಏರ್ಪಡಿಸಿದ್ದ ಜಿಲ್ಲಾಮಟ್ಟದ ಮೂಲ ತರಬೇತಿ ಹಾಗೂ ಮುಂದುವರಿದ ತರಬೇತಿಯ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಂಗಳವಾರ ಮಾತನಾಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನದ ಜತೆಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ. ಹಾಗಾಗಿ ಎಲ್ಲಾ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್‌ಗೆ ಸೇರ್ಪಡೆಗೊಳ್ಳಲು ಮುಂದಾಗಬೇಕು. ಸ್ಕೌಟಿಂಗ್ ಮತ್ತು ಗೈಡಿಂಗ್ "ಯುವಜನರಿಗೆ ಸ್ವಯಂಪ್ರೇರಿತ ಶಿಸ್ತು, ಸಂಯಮ ಉತ್ತಮ ನಾಯಕತ್ವ ಬೆಳೆಸುವ ಹಾಗೂ ಭಾತೃತ್ವ ಮತ್ತು ಸೇವಾ ಮನೋಭಾವ ಬೆಳೆಸುವ ಶೈಕ್ಷಣಿಕ ಆಂದೋಲನವಾಗಿದೆ, ಇದು ಮೂಲ, ಜನಾಂಗ ಅಥವಾ ಧರ್ಮದ ಭೇದವಿಲ್ಲದೆ ಎಲ್ಲರಿಗೂ ಮುಕ್ತವಾಗಿದೆ. ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಸಂಸ್ಕಾರ ಹಾಗೂ ಸಂಸ್ಕೃತಿಯ ಅರಿವನ್ನು ಮೂಡಿಸುವ ಕೆಲಸ ಹೆಚ್ಚಾಗಬೇಕು. ಮಕ್ಕಳ ಬದುಕಿಗೆ ಅತ್ಯಂತ ಮಹತ್ವದ್ದಾದ ಪರಿಸರ ಜಾಗೃತಿ, ಸ್ವಚ್ಛತೆ ಹಾಗೂ ಪರಿಸರ ಉಳಿಸಿ-ಬೆಳೆಸುವ ಕಾರ್ಯವನ್ನು ಮಕ್ಕಳಲ್ಲಿ ತುಂಬಬೇಕು. ಆರೋಗ್ಯಕ್ಕೆ ಅತ್ಯವಶ್ಯಕವಾದ ಯೋಗಾಭ್ಯಾಸವನ್ನು ಮಕ್ಕಳಲ್ಲಿ ಹೆಚ್ಚಾಗಿ ಬೆಳೆಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸ್ಕೌಟ್ಸ್, ಗೈಡ್ಸ್ ನ ಮೌಲ್ಯಗಳನ್ನು ಕಲಿಸುವ ಮೂಲಕ ಅವರಲ್ಲಿ ಉತ್ತಮ ನಾಗರಿಕ ಮೌಲ್ಯಗಳು, ಪರಸ್ಪರ ಪ್ರೀತಿ ವಿಶ್ವಾಸ ಹಾಗೂ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದರೊಂದಿಗೆ ಅವರನ್ನು ತುರ್ತು ಸಂದರ್ಭಗಳಲ್ಲಿ ಸಾಹಸಮಯ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.
ಜಿಲ್ಲಾ ಸ್ಕೌಟ್ಸ್ ವಿಭಾಗದ ಆಯುಕ್ತ ಜಿಮ್ಮಿ ಸಿಕ್ವೇರಾ ಮಾತನಾಡಿ, ತರಬೇತಿ ಪಡೆದ ಶಿಕ್ಷಕರು ತಮ್ಮ ಶಾಲಾ ಮಕ್ಕಳಲ್ಲಿ ಸ್ಕೌಟ್ಸ್ , ಗೈಡ್ಸ್ ನ ಧ್ಯೇಯೋದ್ದೇಶಗಳ ಬಗ್ಗೆ ಅರಿವು ಮೂಡಿಸಿ ಅವರಲ್ಲಿ ಜೀವನ ಕೌಶಲ್ಯ ಹಾಗೂ ಉತ್ತಮ ನಾಯಕತ್ವ ಬೆಳೆಸಲು ವಿಶೇ? ಗಮನಹರಿಸಬೇಕು ಎಂದು ಹೇಳಿದರು.

ಜಿಲ್ಲಾ ಗೈಡ್ಸ್ ಸಂಸ್ಥೆಯ ಆಯುಕ್ತೆಯೂ ಆಗಿರುವ ಪದ್ಮಶ್ರೀ ಪುರಸ್ಕೃತೆ ರಾಣಿ ಮಾಚಯ್ಯ, ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಗೈಡ್ಸ್‌ನ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ,ತರಬೇತಿ ಸಂಪನ್ಮೂಲ ವ್ಯಕ್ತಿಗಳಾದ ಅಲೀಮ, ಮೈಥಿಲಿರಾವ್, ಉ?ಾರಾಣಿ, ಶಿವಶಂಕರಪ್ಪ, ಟಿ.ಬಿ.ಕುಮಾರಸ್ವಾಮಿ, ಕೆ.ಯು.ರಂಜಿತ್, ವಾಮನ, ಭೋಜಮ್ಮ, ವೀಣಾ, ಗಣೇಶ್, ಭೀಮಯ್ಯ, ಗ್ರಾ.ಪಂ.ಸದಸ್ಯ ಡೀನ್ ಬೋಪಣ್ಣ, ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಂ. ಧನಂಜಯ, ಇತರರು ಇದ್ದರು.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ಗುಣಾತ್ಮಕ ಫಲಿತಾಂಶ ಗಳಿಸುವ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸಿರುವುದನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಶ್ಲಾಘಿಸಿದರು. ಕೊಡಗು ಜಿಲ್ಲೆಗೆ ಉತ್ತಮ ಫಲಿತಾಂಶ ಬರಲು ಶ್ರಮಿಸಿದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋ?ಕರನ್ನು ಅಭಿನಂದಿಸಿದ ಅವರು, ಬರುವ ಶೈಕ್ಷಣಿಕ ವ?ರ್ದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಲು ಎಲ್ಲರೂ ಸಂಘಟಿತ ಪ್ರಯತ್ನ ನಡೆಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net