ಗೈರಾದ ವಿದ್ಯಾರ್ಥಿಗಳ ಶಾಲೆಗೆ ಕರೆ ತಂದ ಶಿಕ್ಷಕರು

Published on

ಪಾತಪಾಳ್ಯ: ಪಾತಪಾಳ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಒಂದು ತಿಂಗಳಿಂದ ಶಾಲೆಗೆ ಗೈರು ಹಾಜರಾಗುತ್ತಿದ್ದರು.

ಇದನ್ನು ಗಮನಿಸಿದ ಶಿಕ್ಷಕರು ತಕ್ಷಣ ಪಾತಪಾಳ್ಯ ಹಾಗೂ ಸಂಗಟಪಲ್ಲಿ ಗ್ರಾಮದ ವಿದ್ಯಾರ್ಥಿಗಳ ಮನೆಗಳಿಗೆ ಶನಿವಾರ ಭೇಟಿ ನೀಡಿ ಪಾಲಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆತರುವಲ್ಲಿ ಯಶಸ್ವಿಯಾದರು. ಮಕ್ಕಳನ್ನು ಶಾಲೆಗೆ ಕರೆತರಲು ಶ್ರಮಿಸಿದ ದೈಹಿಕ ಶಿಕ್ಷಣ ಶಿಕ್ಷಕ ಸಿದ್ದರಾಮಣ್ಣ ಕರಿಗೌಡರ್ ಹಾಗೂ ಶಿಕ್ಷಕರ ಕರ್ತವ್ಯವನ್ನು ಪ್ರಭಾರ ಮುಖ್ಯಶಿಕ್ಷಕ ಎಸ್.ಆರ್. ಸುರೇಂದ್ರಬಾಬು ಮತ್ತು ಗ್ರಾಮಸ್ಥರು ಶ್ಲಾಘಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net