ಬಾಲ್ಯದಲ್ಲಿ ಮಕ್ಕಳಿಗೆ ಸನಾತನ ಸಂಸ್ಕೃತಿ ಶಿಕ್ಷಣ

gan-1
Published on

ಗಂಗೊಳ್ಳಿ: ಬಾಲ್ಯದಲ್ಲಿ ಮಕ್ಕಳಿಗೆ ದೊರೆಯಬೇಕಾದ ಸನಾತನ ಸಂಸ್ಕೃತಿ, ಸಂಸ್ಕಾರಯುತ ಶಿಕ್ಷಣ ನೀಡುವ ಉದ್ದೇಶದಿಂದ ಶಿಶು ಮಂದಿರ ಸ್ಥಾಪನೆಗೊಂಡು ಕಾರ್ಯನಿರ್ವಹಿಸುತ್ತಿದೆ. ಶಿಶು ಮಂದಿರದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣದ ಪ್ರಯೋಜನ ಮಕ್ಕಳ ಪಾಲಕರಿಗೂ ದೊರೆಯುತ್ತಿದೆ. ಅಲ್ಲಿನ ಚಟುವಟಿಕೆ ಹಾಗೂ ಶಿಕ್ಷಣ ಮಕ್ಕಳ ಜೀವನದ ಮೇಲೆ ಬಹಳ ಪ್ರಭಾವ ಬೀರುತ್ತಿದೆ ಎಂದು ಕುಂದಾಪುರ ಸೇವಾ ಸಂಗಮ ಟ್ರಸ್ಟ್ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಹೇಳಿದರು.

ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ನಗರ ಸಭಾಭವನದಲ್ಲಿ ಶನಿವಾರ ಪಾಲಕರ ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಅಧ್ಯಕ್ಷ ಬಿ.ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಸೇವಾ ಸಂಗಮ ಟ್ರಸ್ಟ್ ವಿಶ್ವಸ್ಥೆ ಚಂದ್ರಿಕಾ ಧನ್ಯ ಮಾಹಿತಿ ನೀಡಿದರು.

ಶಿಶು ಮಂದಿರ ಸದಸ್ಯರಾದ ಸವಿತಾ ಯು.ದೇವಾಡಿಗ, ಬಿ.ಲಕ್ಷ್ಮೀಕಾಂತ ಮಡಿವಾಳ, ವಸಂತಿ ಎನ್.ಖಾರ್ವಿ, ಗಾಯತ್ರಿ ಕೊಡಂಚ, ಕುಂದಾಪುರ ಶಿಶು ಮಂದಿರ ಅಧ್ಯಕ್ಷೆ ಕಲ್ಪನಾ, ಪಾಲಕರು ಮೊದಲಾದವರು ಉಪಸ್ಥಿತರಿದ್ದರು. ರೇವತಿ ವೆಂಕಟೇಶ ಕಾರ್ಯಕ್ರಮ ನಿರ್ವಹಿಸಿದರು. ಶಿಶು ಮಂದಿರ ಸಂಚಾಲಕ ಡಾ.ಕಾಶೀನಾಥ ಪೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಅಶ್ವಿತಾ ಜಿ.ಪೈ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net