ಶಿಕ್ಷಕ ವೃತ್ತಿ ಸಂಬಳಕ್ಕಾಗಿ ಮಾಡುವ ಕೆಲಸವಲ್ಲ

05 tth 01,,
ತೀರ್ಥಹಳ್ಳಿಯಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಆರಗ ಜ್ಞಾನೇಂದ್ರ, ಸುಶೀಲಾ ಶೆಟ್ಟಿ, ಪ್ರವೀಣ್, ಟಿ.ವಿ.ಸತೀಶ್ ಇತರರಿದ್ದರು.
Published on

ತೀರ್ಥಹಳ್ಳಿ: ಸುಸಂಸ್ಕೃತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ನಿರ್ಣಾಯಕ. ಸಮಾಜದಲ್ಲಿ ಶಿಕ್ಷಕ ವೃತ್ತಿಗೆ ಸಿಗುವಷ್ಟು ದೊಡ್ಡ ಮಟ್ಟದ ಗೌರವ ಬೇರೆ ಯಾವ ವೃತ್ತಿಗೂ ಇಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಮಂಗಳವಾರ ಪಟ್ಟಣದ ಗಾಯತ್ರಿ ಮಂದಿರದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿದ ಅವರು, ಶಿಕ್ಷಕ ವೃತ್ತಿ ಕೇವಲ ಸಂಬಳಕ್ಕಾಗಿ ಮಾಡುವ ಉದ್ಯೋಗವಲ್ಲ. ವ್ಯಕ್ತಿ ನಿರ್ಮಾಣದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ. ಹೀಗಾಗಿ ಸಮಾಜದಲ್ಲಿ ಶಿಕ್ಷಕ, ಸೈನಿಕ, ರೈತ ಮತ್ತು ವೈದ್ಯರನ್ನು ದೇವರಂತೆ ಕಾಣಲಾಗುತ್ತಿದೆ ಎಂದರು.
ಸರ್ಕಾರಿ ಶಾಲೆಗಳು ಸಹ ತಾಲೂಕಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಿಸಾಟಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲಾ ಮಟ್ಟದಲ್ಲಿ ತಾಲೂಕು ಪ್ರಥಮ ಸ್ಥಾನ ಪಡೆಯುವುದಕ್ಕೆ ಶಿಕ್ಷಕರ ಶ್ರಮವೇ ಮುಖ್ಯ ಕಾರಣ ಎಂದು ಹೇಳಿದರು.
ಉತ್ತಮ ಸಾಧನೆ ಮಾಡಿದ ಶಿಕ್ಷಕರು ಹಾಗೂ ಫಲಿತಾಂಶದಲ್ಲಿ ಸಾಧನೆ ಶಾಲೆಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಪಪಂ ಮಾಜಿ ಅಧ್ಯಕ್ಷೆ ಸುಶೀಲಾ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ತಾಪಂ ಇಒ ಎಂ.ಶೈಲಾ, ಬಿಇಒ ವೈ.ಗಣೇಶ್, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷೆ ಕೆ.ಎನ್.ಜಯಂತಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಬಲೇಶ್ವರ ಹೆಗ್ಡೆ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಪ್ರವೀಣ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ವಿ.ಸತೀಶ್, ಬಿ.ವಿ.ಚಂದ್ರಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net