ವಿವಿಗಳಿಗೆ ಬೋಧಕ ಹುದ್ದೆಗಳ ಭರ್ತಿ ಅಧಿಕಾರ

Sudhakar_VV
Published on

ತುಮಕೂರು: ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕ ಮಾಡಿಕೊಳ್ಳುವ ಅಧಿಕಾರವನ್ನು ವಿಶ್ವವಿದ್ಯಾಲಯಗಳಿಗೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್​ ಹೇಳಿದರು.

ತುಮಕೂರು ವಿವಿ 17ನೇ ಟಿಕೋತ್ಸವದಲ್ಲಿ ಬುಧವಾರ ಮಾತನಾಡಿದ ಅವರು, ವಿವಿಗಳಲ್ಲಿ ಉದ್ಯೋಗಾಧರಿತ ಕೌಶಲ ಸಂಬಂಧಿಸಿದ ಹೊಸ ಕೋರ್ಸ್​ ಅನ್ನು 45 ಪ್ರಥಮ ಕಾಲೇಜುಗಳಲ್ಲಿ ಆರಂಭಿಸಿದ್ದು 1500 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇನ್ನೂ ಗುಣಮಟ್ಟದ ಶಿಕ್ಷಣದ ಜತೆಗೆ ವೃತ್ತಿ ಕೌಶಲಗಳನ್ನು ಕಲಿಸುವುದು ಉನ್ನತ ಶಿಕ್ಷಣ ಇಲಾಖೆಯ ಮುಖ್ಯ ಗುರಿಯಾಗಿದೆ. ಹಾಗಾಗಿ, ಪ್ರತಿಯೊಂದು ಪದವಿ ಕಾಲೇಜುಗಳ ಅಂತಿಮ ಸೆಮಿಸ್ಟಾರ್​ ವಿದ್ಯಾರ್ಥಿಗಳಿಗೆ ಇಂರ್ಟನ್​ಶಿಪ್​ ಕಡ್ಡಾಯಗೊಳಿಸಿದ್ದು, ವಿದ್ಯಾರ್ಥಿವೇತನ ಸಹ ನೀಡುತ್ತಿದ್ದೇವೆ ಎಂದರು.

ನಮ್ಮ ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಹೊಸ ಸ್ಪರ್ಶ ನೀಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದೇವೆ. ಉದ್ಯೋಗಾಧಾರಿತ ಶಿಕ್ಷಣಕ್ಕೆ ಒತ್ತು ಕೊಡಲು ಕೌಶಲ ಕೋರ್ಸ್​ಗಳನ್ನು ಪದವಿ ಕಾಲೇಜುಗಳಲ್ಲಿ ಆರಂಭಿಸಲಾಗಿದೆ. ನಮ್ಮ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣದ ಗುಣಮಟ್ಟದ ಹೆಚ್ಚಿಸುವ ನಿಟ್ಟಿನಲ್ಲಿ ಬ್ರಿಟಿಷ್​ ಕೌನ್ಸಿಲ್​ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ಜತೆ ಚರ್ಚೆ ನಡೆಸಿದ್ದೇವೆ. ಡಾ.ಎಂ.ಸಿ.ಸುಧಾಕರ್​ ಉನ್ನತ ಶಿಕ್ಷಣ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net