ಕೀಟ ನಿಯಂತ್ರಣದ ಸಲಹೆ ಕೊಡಿ: ಜಿಪಂ ಸಿಇಒ ಕೆ.ಆರ್.ನಂದಿನಿ ಸೂಚನೆ

Technical capacity building meeting Mandya
Published on

ಮಂಡ್ಯ: ಮಂಡ್ಯ ಭಾಗದಲ್ಲಿ ತೆಂಗು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ರೈತರ ಜೀವನಾಧಾರವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಹೇಳಿದರು.

ನಗರದ ತೋಟಗಾರಿಕೆ ಇಲಾಖೆ ಕಚೇರಿಯ ಸಭಾಂಗಣದಲ್ಲಿ ತೆಂಗು ಅಭಿವೃದ್ಧಿ ಮಂಡಳಿ ಕೊಚ್ಚಿ ಸಹಯೋಗದೊಂದಿಗೆ ತೋಟಗಾರಿಕೆ ಇಲಾಖೆ ವತಿಯಿಂದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಇಲಾಖಾ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ತಾಂತ್ರಿಕ ಸಾಮರ್ಥ್ಯಾಭಿವೃದ್ಧಿ ಸಭೆಯಲ್ಲಿ ವಿಡಿಯೋ ಸಂವಾದ ಮೂಲಕ ಭಾಗಿಯಾಗಿ ಮಾತನಾಡಿದರು.

Ceo-Nandini-Mandya

ಹೋಬಳಿ, ತಾಲೂಕು ಮಟ್ಟದಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳು ತಮ್ಮ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. ಈ ಮೂಲಕ ಬೆಳೆಗಳಿಗೆ ಹರಡುವ ಕೀಟ ಮತ್ತು ರೋಗಗಳ ನಿಯಂತ್ರಣದ ಬಗ್ಗೆ ಹಾಗೂ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಮಾಹಿತಿ ಪಡೆದುಕೊಂಡು ರೈತರಿಗೆ ಅನುಕೂಲವಾಗುತಂಹ ಕೆಲಸಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಮೈಸೂರು ವಿಭಾಗ ತೋಟಗಾರಿಕೆ ಜಂಟಿ ನಿರ್ದೇಶಕ ನಾಗರಾಜು ಮಾತನಾಡಿ, ತೆಂಗು ಮಂಡ್ಯ ಭಾಗದ ಮುಖ್ಯ ತೋಟಗಾರಿಕೆ ಬೆಳೆಯಾಗಿದೆ. ಇಂದಿನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ತೆಂಗಿನ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆಯ ಬಗ್ಗೆ ವಿಚಾರವನ್ನು ಮನನ ಮಾಡಿಕೊಂಡು ರೈತರಿಗೆ ಅನುಕೂಲವಾಗುವಂತಹ ವಾತಾವರಣವನ್ನು ಸಷ್ಟಿಸಿ ಹಾಗೂ ರೈತರು ತೆಂಗಿನಿಂದ ಹೆಚ್ಚಿನ ಆದಾಯ ಗಳಿಸುವ ನಿಟ್ಟಿನಲ್ಲಿ ಕ್ಷೇತ್ರ ಮಟ್ಟದ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಕಿವಿಮಾತು ಹೇಳಿದರು.

ಅರಸೀಕೆರೆ ಪರಿಶೋಧನಾ ಕೇಂದ್ರ ವಿಜ್ಞಾನಿಗಳಾದ ಡಾ.ಜಗದೀಶ್, ಡಾ.ಸುದರ್ಶನ್ ಹಾಗೂ ಡಾ.ಪ್ರಶಾಂತ್ ಅಧಿಕಾರಿಗಳಿಗೆ ತೆಂಗು ಬೆಳೆಯುವ ರೀತಿ, ಕೀಟ ಮತ್ತು ರೋಗಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ತೋಟಗಾರಿಕೆ ಉಪನಿರ್ದೇಶಕಿ ರೂಪಶ್ರೀ, ಬೆಂಗಳೂರು ತೆಂಗು ಅಭಿವೃದ್ಧಿ ಮಂಡಳಿ ನಿರ್ದೇಶಕಿ ರಶ್ಮಿ, ಸಿಡಿಬಿ ಉಪನಿರ್ದೇಶಕ ಗುರುರಾಜ್ ಇತರರಿದ್ದರು.

ತೋಟಗಳಿಗೆ ಭೇಟಿ: ಕಾರ್ಯಕ್ರಮದ ನಂತರ ಅಧಿಕಾರಿಗಳ ತಂಡವು ಕಪ್ಪು ತಲೆ ಹುಳುವಿನಿಂದ ಭಾದೆಗೊಳಗಾದ ಮದ್ದೂರು ತಾಲೂಕಿನ ತೈಲೂರು, ಮಾದನಾಯಕನಹಳ್ಳಿ, ವೈದ್ಯನಾಥಪುರ ಭಾಗದ ವಿವಿಧ ರೈತರ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮಾತ್ರವಲ್ಲದೆ ಕೀಟ ನಿರ್ವಹಣೆಯ ಬಗ್ಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net