ತಾಂತ್ರಿಕ ಶಿಕ್ಷಣದ ಪ್ರಯೋಜನೆ ಪಡೆಯಿರಿ

04 KUDLAGI 01
ಕೂಡ್ಲಿಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಚಾಲನೆ ನೀಡಿದರು. ತಹಸೀಲ್ದಾರ್ ವಿ.ಕೆ.ನೇತ್ರಾವತಿ, ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಸ್ಥಾಯಿ ಸಮಿತಿ ಅಧ್ಯಕ್ಷ ಸಯ್ಯದ್ ಶುಕೂರ್, ಪ್ರಾಚಾರ್ಯ ಅಬ್ದುಲ್ ರೆಹಮಾನ್, ಜಿಪಂ ಎಇಇ ಮಲ್ಲಿಕಾರ್ಜುನ, ಶಫಿ ಇಂಜನೀಯರ್ ಇತರರಿದ್ದರು.
Published on

ಕೂಡ್ಲಿಗಿ: ತಾಂತ್ರಿಕ ಶಿಕ್ಷಣದಿಂದ ಹೆಚ್ಚು ಅವಕಾಶಗಳಿದ್ದು, ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಿ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.

ಪಟ್ಟಣದ ಹೊರವಲಯದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶನಿವಾರ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಗತ್ತು ಪ್ರಸ್ತುತ ದಿನಗಳಲ್ಲಿ ತಾಂತ್ರಿಕವಾಗಿ ಮುಂದುವರೆಯುತ್ತಿದ್ದು, ಇದಕ್ಕೆ ಪೂರಕವಾಗಿ ವಿದ್ಯಾಭ್ಯಾಸ ಮಾಡಬೇಕು. ಗ್ರಾಮೀಣ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದ ಕಡೆ ಗಮನಹರಿಸಬೇಕು. ಈ ನಿಟ್ಟಿನಲ್ಲಿ ಪಟ್ಟಣದ ಪಾಲಿಟೆಕ್ನಿಕ್ ಕಾಲೇಜಿಗೆ ಅಗತ್ಯ ಸೌಲಭ್ಯ ಒದಗಿಸಲಾಗಿದೆ.

ಕಂಪ್ಯೂಟರ್ ಸೇರಿದಂತೆ ಪ್ರಯೋಗಾಲಯದ ಪರಿಕರಗಳನ್ನು ನೀಡಿದ್ದು, ಹೆಚ್ಚುವರಿ ಕೊಠಡಿಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ವಸತಿ ನಿಲಯದ ಬೇಡಿಕೆ ಸಲ್ಲಿಸಿದ ಹಿನ್ನೆಲೆಯಲ್ಲಿ ಪಾಲಿಟೆಕ್ನಿಕ್ ಕಾಲೇಜಿಗೆ ಹೊಂದಿಕೊಂಡ ವಸತಿ ನಿಲಯಕ್ಕೆ ಅನುದಾನ ನೀಡಲಾಗಿದ್ದು, ಕಾಮಗಾರಿ ಕೊನೆ ಹಂತದಲ್ಲಿದೆ. ಕಾಲೇಜುವತಿಯಿಂದ ಪ್ರತಿಷ್ಠಿತ ಕಂಪನಿಗಳ ಮೂಲಕ ಕ್ಯಾಂಪಸ್ ಸೆಲೆಕ್ಷನ್‌ಗೆ ಅವಕಾಶ ನೀಡಿ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಲು ಕ್ರಮ ವಹಿಲಾಗುವುದು ಎಂದರು.

ಉಪನ್ಯಾಸಕ ರಾಘವೇಂದ್ರ, ಪ್ರಮುಖರಾದ ನೀಲಕಂಠಚಾರಿ, ಕುಮಾರಸ್ವಾಮಿ, ತಾವರೇನಾಯ್ಕ, ಪ್ರಮೋದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net