ಮತದಾನದ ಹಕ್ಕು ಚಲಾಯಿಸಿ

UNTILETED 10
ಹೂವಿನಹಡಗಲಿಯಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಅಭಿಯಾನ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ತಹಸೀಲ್ದಾರ್ ಸಂತೋಷ್ ಕುಮಾರ್ ಉದ್ಘಾಟಿಸಿದರು. ಪ್ರಾಚಾರ್ಯ ಎಸ್.ಎಸ್.ಪಾಟೀಲ್, ಕಾಲೇಜು ಆಡಳಿತ ಮಂಡಳಿ ಸದಸ್ಯ ಕೆ.ಎಂ.ಉದಾಸಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೈ.ಚಂದ್ರಬಾಬು, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಶರಣಪ್ಪ ಜಕ್ಕಲಿ ಇತರರಿದ್ದರು.
Published on

ಹೂವಿನಹಡಗಲಿ: ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಅವಶ್ಯವಾಗಿದ್ದು, ಮತದಾನದಿಂದ ಬಲಿಷ್ಠ ದೇಶ ಕಟ್ಟಲು ಸಾಧ್ಯ ಎಂದು ತಹಸೀಲ್ದಾರ್ ಸಂತೋಷ್ ಕುಮಾರ್ ಹೇಳಿದರು.

ಪಟ್ಟಣದ ಜಿಬಿಆರ್ ಕಾಲೇಜಿನಲ್ಲಿ ಕಂದಾಯ ಇಲಾಖೆ, ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ರಾಜ್ಯಶಾಸ್ತ್ರ ವಿಭಾಗದಿಂದ ಗುರುವಾರ ಆಯೋಜಿಸಿದ್ದ ಮತದಾನ ಜಾಗೃತಿ ಅಭಿಯಾನ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಮೂಲಕ ಸರ್ಕಾರ ರಚಿಸುವ ಅವಕಾಶಗಳಿರುವುದರಿಂದ ಮಕ್ಕಳಿಗೆ ವಿದ್ಯಾಭ್ಯಾಸದ ಜತೆಗೆ ಸಾಮಾಜಿಕಪ್ರಜ್ಞೆ ಮೂಡಿಸುವುದು ಅಗತ್ಯವಾಗಿದೆ. ವಿದ್ಯಾವಂತರೇ ಮತದಾನದಲ್ಲಿ ಪೂರ್ಣ ಪ್ರಮಾಣದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ತಿಳಿಸಿದರು.

ಚುನಾವಣೆಗಳ ಸಂದರ್ಭದಲ್ಲಿ ಸರ್ಕಾರಿ ರಜೆ ಹಾಗೂ ಅಧಿಕಾರಿಗಳಿಗೆ ಮುಂಚಿತವಾಗಿ ಮತ ಚಲಾಯಿಸುವ ಸೌಲಭ್ಯ ಕಲ್ಪಿಸಿದ್ದರೂ ಮತದಾನ ಪ್ರಮಾಣ ಕುಂಠಿತಗೊಳ್ಳುತ್ತಿದೆ. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು ಮತದಾನದ ಹಕ್ಕು ಹೊಂದುವ ಮೂಲಕ ಉತ್ತಮ ಆಡಳಿತಗಾರರನ್ನು ಆಯ್ಕೆ ಮಾಡಬೇಕು. ವಿದ್ಯಾರ್ಥಿಗಳೂ ನೆರೆಹೊರೆಯವರಿಗೆ ಮತದಾನದ ಜಾಗೃತಿ ಮೂಡಿಸಬೇಕು ಎಂದರು.

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎ.ಕೊಟ್ರಗೌಡ ಚುನಾವಣೆಯ ನಿಯಮಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.

ಪ್ರಾಚಾರ್ಯ ಎಸ್.ಎಸ್.ಪಾಟೀಲ್, ಕಾಲೇಜು ಆಡಳಿತ ಮಂಡಳಿ ಸದಸ್ಯ ಕೆ.ಎಂ.ಉದಾಸಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೈ.ಚಂದ್ರಬಾಬು, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಶರಣಪ್ಪ ಜಕ್ಕಲಿ, ಎನ್‌ಎಸ್‌ಎಸ್ ಘಟಕಾಧಿಕಾರಿ ಮಾಬುಸಾಬ್, ವಿದ್ಯಾರ್ಥಿಗಳು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net