ತಹಸೀಲ್ದಾರ್ ಕಚೇರಿಯಲ್ಲಿದೆ ಭ್ರಷ್ಟಾಚಾರ

2
ಬೈಲಹೊಂಗಲದಲ್ಲಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಎಸಿ ಪ್ರಭಾವತಿ ಕೀರಪುರ ಅವರಿಗೆ ಮನವಿ ಸಲ್ಲಿಸಿದರು. ಸುರೇಶ ರಾಯಪ್ಪಗೋಳ, ರಫೀಕ್ ಬಡೇಘರ್, ರುದ್ರಪ್ಪ ಮುಂದಿನಮನಿ, ರುದ್ರಪ್ಪ ನಿಂಗಣ್ಣವರ ಇತರರಿದ್ದರು.
Published on

ಬೈಲಹೊಂಗಲ: ಪಟ್ಟಣದ ತಹಸೀಲ್ದಾರ್ ಸಚ್ಚಿದಾನಂದ ಕುಚನೂರ ಅವರು ಜನರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ತಹಸೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದರು.

ದಲಿತ ಸಂಘಟನೆ ರಾಜ್ಯಾಧ್ಯಕ್ಷ ಸುರೇಶ ರಾಯಪ್ಪಗೋಳ, ಸಾಮಾಜಿಕ ಕಾರ್ಯಕರ್ತ ರಫೀಕ್ ಬಡೇಘರ್ ಮಾತನಾಡಿ, ತಹಸೀಲ್ದಾರ್ ಕಚೇರಿಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆರೋಪಿಸಿದರು.

ಪ್ರತಿಭಟನಾ ಸ್ಥಳಕ್ಕಾಗಮಿಸಿದ ಎಸಿ ಪ್ರಭಾವತಿ ಕೀರಪುರ ಮಾತನಾಡಿ, ಪ್ರತಿಭಟನಾಕಾರರ ಬೇಡಿಕೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು. ತಹಸೀಲ್ದಾರ್ ಸಚ್ಚಿದಾನಂದ ಕುಚನೂರ ಸುದ್ದಿಗಾರರೊಂದಿಗೆ ಮಾತನಾಡಿ, ತಹಸೀಲ್ದಾರ್ ಕಚೇರಿಯಲ್ಲಿ ಜನರು ನೇರವಾಗಿ ಸಿಬ್ಬಂದಿ ಮೂಲಕ ಕೆಲಸ ಮಾಡಿಕೊಳ್ಳಬೇಕು ಎಂದರು.

ಮುಖಂಡರಾದ ರುದ್ರಪ್ಪ ಮುಂದಿನಮನಿ, ರುದ್ರಪ್ಪ ನಿಂಗಣ್ಣವರ, ಸಂಜೀವ ಮುರಗೋಡ, ಶಿವಯೋಗಿ ಹುಲ್ಲೆಣ್ಣವರ, ಚಂದ್ರಿಕಾ ಕಳಂಕರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net