ಖಾಸಗಿ ಕ್ಲಿನಿಕ್‌ಗಳಲ್ಲಿ ತಹಸೀಲ್ದಾರ್ ಪರಿಶೀಲನೆ

12KMD-2
Published on

ಕೆ.ಎಂ.ದೊಡ್ಡಿ: ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಹಿನ್ನೆಲೆೆಯಲ್ಲಿ ಇಲ್ಲಿನ ಖಾಸಗಿ ಕ್ಲಿನಿಕ್‌ಗಳನ್ನು ಜಾಗೃತ ದಳದ ಅಧ್ಯಕ್ಷರೂ ಆದ ತಹಸೀಲ್ದಾರ್ ನೇತೃತ್ವದ ತಂಡ ಪರಿಶೀಲಿಸಿತು.
ತಹಸೀಲ್ದಾರ್ ಸೋಮಶೇಖರ್ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಖಾಸಗಿ ಕ್ಲಿನಿಕ್‌ಗಳಿಗೆ ತೆರಳಿ ಪರಿಶೀಲಿಸಿದರು. ಈ ವೇಳೆ ವೈದ್ಯರ ಪ್ರಮಾಣ ಪತ್ರ ಮತ್ತು ಪರವಾನಗಿ ಸೇರಿದಂತೆ ಹಲವು ದಾಖಲಾತಿಗಳನ್ನು ಪರಿಶೀಲಿಸಿ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ತಡೆ ಬಗ್ಗೆ ಜಾಗೃತಿ ಮೂಡಿಸಿತು.
ಅಧಿಕಾರಿಗಳ ತಂಡ ಕ್ಲಿನಿಕ್‌ಗಳ ತಪಾಸಣೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಹಲವು ಖಾಸಗಿ ಒಡೆತನದ ವೈದ್ಯರು ಕಾಲ್ಕಿತ್ತರೆ, ಕೆಲವರು ತಪಾಸಣೆಗೆ ಆಗಮಿಸುತ್ತಿದ್ದಾರೆ ಎಂಬ ಸುಳಿವರಿತು ಕ್ಲಿನಿಕ್‌ಗಳನ್ನು ಸ್ವತಃ ಮುಚ್ಚಿದ್ದರು.

ತಹಸೀಲ್ದಾರ್ ಸೋಮಶೇಖರ್ ಮಾತನಾಡಿ, ಹೆಣ್ಣು ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆಯಂತಹ ಪ್ರಕರಣಗಳು ನಡೆಯದಂತೆ ನಿಗಾ ವಹಿಸಿಲು ತಾಲೂಕು ಮಟ್ಟದ ಜಾಗೃತಿ ದಳವನ್ನು ರಚಿಸಲಾಗಿದೆ. ಖಾಸಗಿ ಕ್ಲಿನಿಕ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿ ಕೆಪಿಎಂಇ ನೋಂದಣಿ ಬಗ್ಗೆ ವಿಚಾರಣೆ ನಡೆಸಿ ಮಾಹಿತಿ ಪಡೆದು ಸರ್ಕಾರಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವ ಖಾಸಗಿ ಕ್ಲಿನಿಕ್‌ಗಳ ವೈದ್ಯರು ಹಾಗೂ ಲ್ಯಾಬ್‌ಗಳಿಗೆ ಎಚ್ಚರಿಕೆ ನೀಡಿರುವುದಾಗಿ ತಿಳಿಸಿದರು. ಕಂದಾಯ ಅಧಿಕಾರಿ ಶ್ರೀನಿವಾಸ್, ಗ್ರಾಮ ಲೆಕ್ಕಾಧಿಕಾರಿ ಜೆ.ರವಿ ಹಲವರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net